ಜಿಲ್ಲೆ

ಸರ್ವೀಸ್ ರಸ್ತೆ ಕಾಮಗಾರಿ ಅವೈಜ್ಞಾನಿಕ

ರಾಜಣ್ಣ

ಅರಸೀಕೆರೆ: ತಾಲೂಕಿನ ಕಾಟೀಕೆರೆ ಗ್ರಾಮದ ಹೊರವಲಯದಲ್ಲಿ ಹಾದುಹೋಗಿರುವ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಬದಿಯ ಸರ್ವೀಸ್ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿದ್ದು ಪಾದಚಾರಿಗಳು, ವಾಹನ ಸವಾರರಿಗೆ ಕಿರಿಕಿರಿಯಾಗುತ್ತಿದೆ.


ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಯಲ್ಲಿ ಭಾರಿ ಪ್ರಮಾಣದ ನೀರು ಸಂಗ್ರಹಗೊಂಡಿದೆ. ಇದರಿಂದಾಗಿ ಅಂಚೆಕೊಪ್ಪಲು-ಜಾವಗಲ್ ಮಾರ್ಗವಾಗಿ ತೆರಳುವ ವಾಹನ ಸವಾರರು, ಪಾದಚಾರಿಗಳು ಕೊಂಚ ಎಚ್ಚರ ತಪ್ಪಿದರೂ ಅವಘಡ ನಿಶ್ಚಿತ ಎನ್ನುವಂತಾಗಿದೆ. ಸರ್ವೀಸ್ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ನಿರ್ಮಾಣ ಮಾಡದಿರುವುದು ತೊಂದರೆಗೆ ಕಾರಣವಾಗಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಲೋಪ ಸರಿಪಡಿಸಬೇಕು. ಇಲ್ಲದಿದ್ದಲ್ಲಿ ಹೆದ್ದಾರಿ ಪ್ರಾಧಿಕಾರದ ಕಚೇರಿ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಂಕೋಡನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.