ಕೊಳ್ಳೇಗಾಲ: ತಾಲೂಕಿನ ಹೊಸಮಾಲಂಗಿ ಗ್ರಾಮದಲ್ಲಿ ಗುರುವಾರ ರಾತ್ರಿ ಜೂಜಾಡುತ್ತಿದ್ದ ಏಳು ಜನರನ್ನು ಪೊಲೀಸರು ಬಂಧಿಸಿದ್ದು, ಪಣಕ್ಕಿಟ್ಟಿದ್ದ 6,750 ರೂಪಾಯಿ ಜಪ್ತಿ ಮಾಡಿದ್ದಾರೆ.
ಹೊಸಮಾಲಂಗಿ ಗ್ರಾಮದ ದೇವರಸನಾಯಕ, ಪ್ರಸಾದ್, ಸಿದ್ದರಾಜು, ಕೆ.ಬಸವರಾಜು, ರಾಜು, ರಮೇಶ್, ಹಾಗೂ ಬಿ.ಹರೀಶ್ ಬಂಧಿತರು. ಗ್ರಾಮದ ಬಂಡಿದಾರಿಯಲ್ಲಿ ಜೂಜಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಕರಿಬಸಪ್ಪ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಬಂಧ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರಿಗೆ ನೋಟಿಸ್ ಜಾರಿ ಮಾಡಿ ಬಿಡುಗಡೆ ಮಾಡಿದ್ದಾರೆ. ದಾಳಿಯಲ್ಲಿ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ಮಲ್ಲಿಕಾರ್ಜುನ, ಸಿಬ್ಬಂದಿ ಬಸವರಾಜು, ದರ್ಶನ್, ಪರಮೇ ಶ್, ಉಸ್ಮನ್ ಇದ್ದರು.