ಜಿಲ್ಲೆ

ಏಳು ತಂಡಗಳಿಗೆ ಮುನ್ನಡೆ

ವಸಂತಕುಮಾರ್ ಬಿ

ಗೋಣಿಕೊಪ್ಪಲು: ಚೆಕ್ಕೇರ ಒಕ್ಕ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನದಲ್ಲಿ ನಡೆಯುತ್ತಿರುವ ಚೆಕ್ಕೇರ ಕ್ರಿಕೆಟ್ ನಮ್ಮೆಯಲ್ಲಿ ಮಂಗಳವಾರ 7 ತಂಡಗಳು ಮುನ್ನಡೆ ಪಡೆದುಕೊಂಡಿವೆ.

ಕೋಳೇರ ಮತ್ತು ಮನೆಯಪಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮನೆಯಪಂಡ ಕಂಬೀರಂಡ ತಂಡ ನಿಗದಿತ 6 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 26 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಕೋಳೇರ ತಂಡ 1 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಕೋಡೀರ ಮತ್ತು ಚೋವಂಡ ತಂಡಗಳ ನಡುವೆ ನಡೆದ ಪಂದ್ಯಾವಳಿಯಲ್ಲಿ ಮೊದಲು ಬ್ಯಾಟ್ ಮಾಡಿದ ಚೋವಂಡ ತಂಡ ನಿಗದಿತ 6 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 61 ರನ್ ಗಳಿಸಿತು. ಕೋಡೀರ ತಂಡ 1 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಕೊಚ್ಚೇರ ಮತ್ತು ಕೋಲೀರ ತಂಡಗಳ ನಡುವೆ ನಡೆದ ಪಂದ್ಯಾವಳಿಯಲ್ಲಿ ಕೊಚ್ಚೇರ ತಂಡ ನಿಗದಿತ 6 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು. ಕೋಲೀರ ತಂಡ 2 ವಿಕೆಟ್ ನಷ್ಟಕ್ಕೆ 42 ರನ್ ಗಳಿಸಲಷ್ಟೇ ಶಕ್ತವಾಯಿತು.

ಕಲ್ಯಾಟಂಡ ಮತ್ತು ನಾಪಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಕಲ್ಯಾತಂಡ ತಂಡ ಬಾರದ ಕಾರಣ ನಾಪಂಡ ತಂಡ ಮುಂದಿನ ಹಂತಕ್ಕೆ ಪ್ರವೇಶ ಪಡೆಯಿತು.

ಪುಲ್ಲಂಗಡ ಮತ್ತು ಬದಲೆರ ತಂಡಗಳ ನಡುವಿನ ಪಂದ್ಯದಲ್ಲಿ ಬದಲೆರ ತಂಡ ನಿಗದಿತ 6 ಓವರ್‌ಗಳಲ್ಲಿ 6 ವಿಕೆಟ್ ನಷ್ಟವಿಲ್ಲದೆ 36 ರನ್ ಗಳಿಸಿತು. ಪುಲ್ಲಂಗಡ ತಂಡ 4 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಕೂತಂಡ ಮತ್ತು ಮಲ್ಲಾಜಿರ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಮಲ್ಲಾಜಿರ ತಂಡ ನಿಗದಿತ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 73 ರನ್ ಗಳಿಸಿತು. ಕೂತಂಡ 5 ವಿಕೆಟ್ ಕಳೆದುಕೊಂಡು 39 ರನ್ ಗಳಿಸಿತು. ಬೊಳ್ಳೆಪಂಡ ಮತ್ತು ಅರಮಣಮಾಡ ತಂಡಗಳ ನಡುವಿನ ಪಂದ್ಯದಲ್ಲಿ ಬೊಳ್ಳೆಪಂಡ ತಂಡ ನಿಗದಿತ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 54 ರನ್ ಗಳಿಸಿತು. ಅರಮಣಮಾಡ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.