ಜಿಲ್ಲೆ

ಮೂಲ್ಕಿಯಲ್ಲಿ ಚರಂಡಿ ಹೂಳೆತ್ತುವ ಕಾರ್ಯ

ಸೌಮ್ಯ ಆರ್

ಮೂಲ್ಕಿ: ಪಂಚಾಯಿತಿ ವ್ಯಾಪ್ತಿಯಲ್ಲಿ ಚರಂಡಿ ಹೂಳೆತ್ತುವ ಕಾರ್ಯ ನಡೆಯುತ್ತಿದ್ದು ನಾಗರಿಕರ ಸಹಕಾರ ಬಹಳ ಅಗತ್ಯ ಎಂದು ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್ ಹೇಳಿದರು.

ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಚರಂಡಿಯ ಹೂಳೆತ್ತುವ ಕಾರ್ಯ ಬಿರುಸಿನಿಂದ ನಡೆಯುತ್ತಿದ್ದು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದರು. ಮಳೆಗಾಲದಲ್ಲಿ ಸೋಂಕು ರೋಗಗಳು ಹರಡುವ ಕಾರಣ ಕಸ ಕಡ್ಡಿ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಸ್ವಚ್ಛತೆಗೆ ಪ್ರಾಮುಖ್ಯ ನೀಡಬೇಕು ಎಂದರು. ನಗರ ಪಂಚಾಯಿತಿ ಮುಖ್ಯಾಧಿಕಾರಿ ಮಧುಕರ್ ಹಾಜರಿದ್ದರು.