ಜಿಲ್ಲೆ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ

reportermys


ಮೈಸೂರು: ಒಂಬತ್ತುವರೆ ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಸಂಬಂಧ ನಗರದ ಪೊಲೀಸ್ ಠಾಣೆಯೊಂದರಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಾಲಕಿ ಅನಾರೋಗ್ಯಕ್ಕೆ ಒಳಗಾಗಿ ವಾಂತಿ ಮಾಡಿಕೊಳ್ಳುತ್ತಿದ್ದಳು. ಹಾಗಾಗಿ, ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆಂದು ಆಕೆ ತಾಯಿ ಕರೆದುಕೊಂಡು ಹೋಗಿದ್ದು, ಈ ವೇಳೆ ವೈದ್ಯರು ಚಿಕಿತ್ಸೆ ನೀಡಲು ಬಾಲಕಿಯನ್ನು ಪರೀಕ್ಷೆ ಮಾಡುವ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ತಿಳಿದು ಬಂದಿದೆ.


ಬಾಲಕಿ ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ಆಕೆಯಿಂದ ಯಾವುದೇ ಹೇಳಿಕೆ ಪಡೆಯಲು ಪೊಲೀಸರಿಗೆ ಸಾಧ್ಯ ವಾಗಿಲ್ಲ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.