ಕಾಸರಗೋಡು: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕ, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎರಡು ಪ್ರತ್ಯೇಕ ಪೋಕ್ಸೋ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹತ್ತರ ಹರೆಯದ ಬಾಲಕನನ್ನು ಅಂಗಡಿಗೆ ಕರೆದೊಯ್ದು ಸಲಿಂಗ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಳ ಆರ್.ಎಸ್.ರಸ್ತೆ ನಿವಾಸಿ ಶೇಕ್ ಮೊಯ್ದೀನ್ ಎಂಬಾತನನ್ನು ಬಂಧಿಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ 16ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಮಲ ತಂದೆಯನ್ನು ಪೋಕ್ಸೊ ಅನ್ವಯ ಬಂಧಿಸಲಾಗಿದೆ. ತಾಯಿ ಜತೆ ವಾಸಿಸುತ್ತಿದ್ದ ಬಾಲಕಿಗೆ ಮಲ ತಂದೆ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.