ಕಾಸರಗೋಡು: ಹದಿನಾಲ್ಕರ ಹರೆಯದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಕಲ್ಲುರಾವಿ ನಿವಾಸಿ ಮಶೂಕ್(25) ಎಂಬಾತನನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆ ಪ್ರದೇಶದ 9ನೇ ತರಗತಿ ವಿದ್ಯಾರ್ಥಿಯ ದೂರಿನ ಮೇರೆಗೆ ಪೊಲೀಸರು ಮಶೂಕ್ ವಿರುದ್ಧ ಪೋಕ್ಸೊ ಕಾಯ್ದೆಯನ್ವಯ ಪ್ರಕರಣ ದಾಖಲಿಸಿಕೊಂಡಿದ್ದರು. ಪೊಲೀಸ್ ತನಿಖೆ ನಂತರ ತಲೆಮರೆಸಿಕೊಂಡಿದ್ದ ಮಶೂಕ್‌ನನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಶನಿವಾರ ಬಂಧಿಸಿದ್ದಾರೆ. ಪೊಲೀಸರು ಸಹಪಾಠಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಶಾಲೆಯಲ್ಲಿ ನಡೆದ ಕೌನ್ಸೆಲಿಂಗ್‌ನಲ್ಲಿ ಮಶೂಕ್ ಅಲ್ಲದೆ ಈಕೆಯ ಸಹಪಾಠಿ ಕೂಡ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಬಾಲಕಿ ಬಹಿರಂಗಪಡಿಸಿದ್ದಳು.