Bengaluru: ಬೆಂಗಳೂರಿನಲ್ಲಿ ಹಾಸ್ಟೆಲ್ವೊಂದರಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅಲ್ಲಿನ ಹಿರಿಯ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯವೆಸಗಿರುವ ಆಘಾತಕಾರಿ ಘಟನೆಯೊಂದು ಬುಧವಾರ (ಸೆಪ್ಟೆಂಬರ್ 10) ಬೆಳಕಿಗೆ ಬಂದಿದೆ.
ಬೆಂಗಳೂರಿನ ಹೊರವಲಯದಲ್ಲಿರುವ ಖಾಸಗಿ ಶಾಲೆಯ ಹಾಸ್ಟೆಲ್ವೊಂದರಲ್ಲಿ ಈ ಘಟನೆ ನಡೆದಿದ್ದು, ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಗಳು ಬಲಪಶುವಿನ ಮೇಲೆ ಹಲ್ಲೆ ನಡೆಸಿದ್ದಾರೆ. ಹಾಗೂ ರ‍್ಯಾಗಿಂಗ್ ಮಾಡಲು ಇಚ್ಚಿಸಿದ್ದು, ಆಕೆಗೆ ನಗ್ನವಾಗಿ ನೃತ್ಯ ಮಾಡುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಅವರ ಮಾತಿಗೆ ಸ್ಪಂದಿಸದ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಗಳು ಕಬ್ಬಿಣದ ಹ್ಯಾಂಗರ್‌ನಿಂದ ಹಲ್ಲೆ ಮಾಡಿದ್ದಾರೆ.
ನನ್ನ ಮಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಸತತವಾಗಿ 4 ದಿನಗಳ ಕಾಲ ಲೈಂಗಿಕ ದೌರ್ಜನ್ಯವೆಸಗಿ ಬಟ್ಟೆ ಬಿಚ್ಚಿಸಿ, ನೃತ್ಯ ಮಾಡುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಆಕೆಯ ಮೇಲೆ ಕಬ್ಬಿಣದ ಹ್ಯಾಂಗರ್ಗಳಿಂದ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಶಾಲೆಯ ಪ್ರಾಂಶುಪಾಲರು ಹಾಗೂ ಹಾಸ್ಟೆಲ್ ವಾರ್ಡ್ನ್ಗೆ ದೂರು ನೀಡದರೆ ಅವರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಬನ್ನೇರುಘಟ್ಟ ಪೊಲಿಸರು ಮಾಹಿತಿ ಕಲೆ ಹಾಕಲು ಪ್ರಾರಂಭಿಸಿದ್ದು, ಲೈಂಗಿಕ ದೌರ್ಜನ್ಯವೆಸಗಿದ ಐದು ವಿದ್ಯಾರ್ಥಿಗಳು, ಶಾಲಾ ಪ್ರಾಂಶುಪಾಲರು ಹಾಗೂ ಹಾಸ್ಟೆಲ್ ವಾರ್ಡ್ನ್ ವಿರುದ್ಧ ದೂರು ದಾಖಲಿಸಿದ್ದಾರೆ. (ಏಜೆನ್ಸೀಸ್)