ಸಾಂದರ್ಭಿಕ ಚಿತ್ರ 
ಜಿಲ್ಲೆ

ನ್ಯಾಯಾಲಯದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ; ಅಪ್ರಾಪ್ತ ವಯಸ್ಸಿನವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ

ಮಂಗಳೂರು: ಅಪ್ರಾಪ್ತ ವಯಸ್ಸಿನವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬ ನ್ಯಾಯಾಲಯದ ಆರನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಭೀಕರವಾಗಿ ಸಾವಿಗೀಡಾಗಿದ್ದಾನೆ. ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ.

ಉಳ್ಳಾಲದ ಕಿನ್ಯಾ ನಿವಾಸಿ ರವಿರಾಜ್ (31) ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಕುಡಿದ ಮತ್ತಿನಲ್ಲಿ ಈತ ಅಪ್ರಾಪ್ತ ವಯಸ್ಸಿನವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿದ್ದು, ಸ್ಥಳೀಯರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಿನ್ನೆಯಷ್ಟೇ ಈತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ಇಂದು ಈತನನ್ನು ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದ ಸಂದರ್ಭದಲ್ಲಿ ಈತ ಆರನೇ ಮಹಡಿಯಿಂದ ಹಾರಿದ್ದಾನೆ. ಬಿದ್ದ ರಭಸಕ್ಕೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲಿ ರಕ್ತದ ಮಡುಗಟ್ಟಿದೆ.