ಜಿಲ್ಲೆ

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಶಕ್ತಿ ವಿದ್ಯಾಸಂಸ್ಥೆಗೆ ಪದಕ

Mangaluru - Hariprasad Rai


ಮಂಗಳೂರು : ಮಧ್ಯಪ್ರದೇಶದ ಮದಸ್ಸೂರ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಸ್ಪೀವ್ ಜೆಫ್ ಲೋಬೊ 4 ಚಿನ್ನದ ಪದಕಗಳು ಹಾಗೂ ಶಕ್ತಿ ವಸತಿ ಶಾಲೆಯ ಕೀರ್ತನ್ ಬೇಕಲ್ 2 ಬೆಳ್ಳಿ ಪದಕಗಳನ್ನು ಪಡೆದು 68ನೇ ಎಸ್‌ಜಿಎಫ್‌ಐ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿದ್ದಾರೆ. ಶ್ರೀವಿಷ್ಣು
ಕಂಚಿನ ಪದಕ ಪಡೆದಿದ್ದಾರೆ. ಇವರಿಗೆ ಶಕ್ತಿ ವಿದ್ಯಾ ಸಂಸ್ಥೆಯ ಈಜು ತರಬೇತುದಾರ ನಾಗರಾಜ್ ಖಾರ್ವಿ ತರಬೇತಿ ನೀಡಿದ್ದರು.
ವಿಜೇತರನ್ನು ಸಂಸ್ಥೆಯ ಸಂಸ್ಥಾಪಕ ಡಾ. ಕೆ. ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್, ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.