ಜಿಲ್ಲೆ

ಶಾಲಿನಿ ಶೆಟ್ಟಿ ಬೀಳ್ಕೊಡುಗೆ ಕಾರ್ಯಕ್ರಮ

ಇಂದಿರಾ ಎನ್ ಕೆ

ಶಿರ್ವ: ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ 23 ವರ್ಷ ಶಿಕ್ಷಕಿಯಾಗಿ, ಆರು ವರ್ಷಗಳಿಂದ ಶಿರ್ವದ ಹಿಂದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದುಕೊಂಡಿರುವ ಶಾಲಿನಿ ಶೆಟ್ಟಿಗೆ ಆಡಳಿತ ಮಂಡಳಿ, ಹಳೇ ವಿದ್ಯಾರ್ಥಿ ಸಂಘ, ಶಿಕ್ಷಕ-ರಕ್ಷಕ ಸಂಘ, ಶಾಲಾ ಸಿಬ್ಬಂದಿ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ಜರುಗಿತು.

ಶಾಲಾ ಸಂಚಾಲಕ ವಿ.ಸುಬ್ಬಯ್ಯ ಹೆಗ್ಡೆ ಅಧ್ಯಕ್ಷತೆಯಲ್ಲಿ ಶಾಲಿನಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವಿದ್ಯಾವರ್ಧಕ ಸಂಘ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ, ಶಿಕ್ಷಣ ಸಮಿತಿ ಅಧ್ಯಕ್ಷ ಎಸ್.ನಿತ್ಯಾನಂದ ಹೆಗ್ಡೆ, ಕಳತ್ತೂರು ಕ್ಲಸ್ಟರ್ ಸಿಆರ್‌ಪಿ ಸರಿತಾ ರಾಣಿ, ಹಳೇ ವಿದ್ಯಾರ್ಥಿ ಸಂಘ ಪ್ರಧಾನ ಕಾರ್ಯದರ್ಶಿ ಶ್ರೀಪತಿ ಕಾಮತ್, ನಿವೃತ್ತ ಮುಖ್ಯ ಶಿಕ್ಷಕ ಎನ್.ಪ್ರಭಾಕರ್, ಎಸ್‌ಡಿಎಂಸಿ ಅಧ್ಯಕ್ಷ ಕಿರಣ್, ಶಿಕ್ಷಣ ಸಮಿತಿ ಸದಸ್ಯ ಸಚ್ಚಿದಾನಂದ ಹೆಗ್ಡೆ, ನಿವೃತ್ತ ಮುಖ್ಯ ಶಿಕ್ಷಕರು, ಹಳೇ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಪಾಲಕರು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಲತಾ ಸ್ವಾಗತಿಸಿದರು. ಶುಭಶ್ರೀ ಕಾರ್ಯಕ್ರಮ ನಿರೂಪಿಸಿದರು. ಉಷಾ ವಂದಿಸಿದರು.