ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಕಣಗಾಲು ಗ್ರಾಮದ ಶ್ರೀ ಶನೈಶ್ಚರಸ್ವಾಮಿ ಜೀರ್ಣೋದ್ಧಾರ ಸಮಿತಿ ವತಿಯಿಂದ ಫೆ.27ರಂದು ಮಾ.1ರವರೆಗೆ ಶ್ರೀ ಶನಿದೇವರ ಹೋಮ ಮತ್ತು ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.
ಫೆ.27ರಿಂದ ಪೂಜಾ ಕೈಕಂರ್ಯ ಆರಂಭವಾಗಲಿದೆ. ಮಾ.1ರ ಶನಿವಾರ ಬೆಳಗ್ಗೆ 6 ಗಂಟೆಗೆ ಗ್ರಾಮಸ್ಥರ ಸಹಕಾರದೊಂದಿಗೆ ಪವಿತ್ರ ಕಾವೇರಿ ನದಿ ತೀರದಿಂದ ಶ್ರೀ ಶನಿದೇವರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ. ವಿಶೇಷವಾಗಿ ಅಲಂಕಾರಗೊಂಡ ಪಲ್ಲಕಿಯ ಮೇಲೆ ಪ್ರತಿಷ್ಠಾಪಿಸಿ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು. ಮಧ್ಯಾಹ್ನ ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿದೆ. ಸಂಜೆ ಶನಿಪ್ರಭಾವ ನಾಟಕ ಕೂಡ ಏರ್ಪಡಿಸಲಾಗಿದೆ. ಈ ಮಹೋತ್ಸವಕ್ಕೆ ಪಶು ಸಂಗೋಪನಾ ಮತ್ತು ರೇಷ್ಮೆ ಖಾತೆಯ ಸಚಿವ ಕೆ.ವೆಂಕಟೇಶ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಎಂದು ಸಮಿತಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.