ಜಿಲ್ಲೆ

ಪಂ. ಶಂಕ್ರಪ್ಪ, ಭೀಮಾಬಾಯಿ ಹೂಗಾರ ಪುಣ್ಯಸ್ಮರಣೆ 4ರಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ತಬಲಾ ವಾದಕ ಪಂ. ಶಂಕ್ರಪ್ಪ ಭೀಮಾಬಾಯಿ ಹೂಗಾರ ಸಂಗೀತ ಸಂ ವತಿಯಿಂದ ಮಾ. 4ರಂದು ಸಂಜೆ 5 ಗಂಟೆಗೆ ನಗರದ ಆಲೂರು ವೆಂಕಟರಾವ್​ ಭವನದಲ್ಲಿ ತಬಲಾ ವಾದಕ ಪಂ. ಶಂಕ್ರಪ್ಪ ಮತ್ತು ಭೀಮಾಬಾಯಿ ಹೂಗಾರ ಪುಣ್ಯಸ್ಮರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕಲಾವಿದ ಡಾ. ಮಲ್ಲಿಕಾರ್ಜುನ ತರ್ಲಘಟ್ಟ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ತ್ರೀರೋಗ ತಜ್ಞೆ ಡಾ. ಸೌಭಾಗ್ಯ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ ನ್ಯಾಯವಾದಿ ಡಾ. ಉದಯಕುಮಾರ ದೇಸಾಯಿ, ರಂಗಭೂಮಿ ಕಲಾವಿದ ವೀರಣ್ಣ ಪತ್ತಾರ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಾವಿದ ಪಂ. ಸಿದ್ಧಣ್ಣ ಹೂಗಾರ ಅಧ್ಯಕ್ಷತೆ ವಹಿಸುವರು. ಕೃಷಿ ವಿವಿ ನಿವೃತ್ತ ಪ್ರಾಧ್ಯಾಪಕ ಪಾಂಡುರಂಗ ಶ್ರೀನಿವಾಸ ಕಾವಿ ಅವರಿಗೆ ಸನ್ಮಾನಿಸಲಾಗುವುದು ಎಂದರು.

ಪಂ. ಸಾತಲಿಂಗಪ್ಪ ದೇಸಾಯಿ ಕಲ್ಲೂರ ಮಾತನಾಡಿ, ಸಂಗೀತೋತ್ಸವದಲ್ಲಿ ಸೋಲಾಪುರದ ಪಂ. ಭೀಮಣ್ಣ ಜಾಧವ ಅವರಿಂದ ಸುಂದರಿವಾದನ, ಸಹ ವಾದನದಲ್ಲಿ ಗುರುನಾಥ ಜಾಧವ, ಗೋರಖನಾಥ ಜಾಧವ, ಮಯೂರೇಶ ಜಾಧವ, ವೆಂಕಟೇಶಕುಮಾರ ಜಾಧವ ಪಾಲ್ಗೊಳ್ಳುವರು. ಮೋಹಸಿನ್​ ಖಾನ್​ ಸಿತಾರವಾದನ, ಸದಾಶಿವ ಐಹೊಳೆ ಗಾಯನ ಪ್ರಸ್ತುತಪಡಿಸುವರು. ತಬಲಾದಲ್ಲಿ ಪಂ. ಸಾತಲಿಂಗಪ್ಪ ದೇಸಾಯಿ ಕಲ್ಲೂರ, ಸಂವಾದಿನಿಯಲ್ಲಿ ವಿನೋದ ಪಾಟೀಲ ಸಾಥ್​ ನೀಡುವರು ಎಂದರು.

ಕುಮಾರ ಅಗಡಿ, ಇತರರು ಇದ್ದರು.