ಜಿಲ್ಲೆ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ

Davangere - Desk - Shobha Krishna Gowda

ನ್ಯಾಮತಿ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ತಾಯಂದಿರು ಖಾಸಗಿ ಶಾಲೆ ವ್ಯಾಮೋಹ ಬದಿಗೊತ್ತಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ತಾಲೂಕಿನ ಸೋಗಿಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಸರ್ಕಾರವು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬಿಸಿಯೂಟ, ಸಮವಸ್ತ್ರ, ಶೂ, ಸಾಕ್ಸ್ ಮೊದಲಾದ ಸೌಲಭ್ಯ ನೀಡುತ್ತಿದ್ದು, ಉತ್ತಮ ಶಿಕ್ಷಕ ವೃಂದವೂ ಇದೆ. ಮಕ್ಕಳನ್ನು ಸೇರಿಸಿ ಶಾಲೆಗಳನ್ನು ಉಳಿಸಿ, ಬೆಳೆಸಬೇಕು ಎಂದು ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿದ್ಪಪ್ಪ ಭೋವಿ, ಸದಸ್ಯರು, ಮುಖ್ಯ ಶಿಕ್ಷಕರು, ಗ್ರಾಪಂ ಅಧ್ಯಕ್ಷರು, ಸದಸ್ಯರು ಇದ್ದರು.