ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಕಾರುಗುಂದ ಗೌಡ ಸಮಾಜದ ಸಭಾಂಗಣದಲ್ಲಿ ಶಾರದಾ ಪೂಜೆ ಆಯೋಜಿಸಲಾಗಿತ್ತು. 
ಜಿಲ್ಲೆ

ಕಾರುಗುಂದ ಗೌಡ ಸಮಾಜ ಸಭಾಂಗಣದಲ್ಲಿ ಶಾರದಾ ಪೂಜೆ

ಅಭಿನಯ್ ಎಚ್.ಎಂ

ನಾಪೋಕ್ಲು: ಚೇರಂಬಾಣೆ ಗೌಡ ಮಹಿಳಾ ಒಕ್ಕೂಟ ವತಿಯಿಂದ ಕಾರುಗುಂದ ಗೌಡ ಸಮಾಜ ಸಭಾಂಗಣದಲ್ಲಿ ಶಾರದಾ ಪೂಜೆ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಸದಸ್ಯರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಭಜನಾ ಕಾರ್ಯಕ್ರಮ ನೆರವೇರಿಸಿ ಪ್ರಸಾದ ಸ್ವೀಕರಿಸಿ ದೇವಿ ಕೃಪೆಗೆ ಪಾತ್ರರಾದರು.

ಜಾನಪದ ದಸರಾ ವೇದಿಕೆ ಅಲಂಕಾರದಲ್ಲಿ ಭಾಗವಹಿಸಿದ್ದ ಒಕ್ಕೂಟದ ಸದಸ್ಯರು ಹಾಗೂ ಮಕ್ಕಳು ಮತ್ತು ಮಡಿಕೇರಿ ಹಾಗೂ ಗೋಣಿಕೊಪ್ಪಲು ದಸರಾ ಕ್ರೀಡಾಕೂಟದ ಮಹಿಳೆಯರ ವಿಭಾಗದ ಹಗ್ಗ ಜಗ್ಗಾಟದಲ್ಲಿ ವಿಜೇತರಾದ ತಂಡಕ್ಕೆ ಅಭಿನಂದನೆ ಸಲ್ಲಿಸಲಾಯಿತು. ಪೂಜಾ ವಿಧಿ ವಿಧಾನವನ್ನು ಕೊಟ್ಟೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರಾದ ಮುರಳಿ ಭಟ್ಟ ನೆರವೇರಿಸಿದರು.