ಜಿಲ್ಲೆ

ಮಣಿಪಾಲ ಜ್ಞಾನಸುಧಾದಲ್ಲಿ ಶಾರದಾ ಪೂಜೆ

ಇಂದಿರಾ ಎನ್ ಕೆ

ಕಾರ್ಕಳ: ಮಣಿಪಾಲ ವಿದ್ಯಾನಗರದಲ್ಲಿರುವ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಶಾರದಾ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಣಿಪಾಲ ಜ್ಞಾನಸುಧಾಪದವಿ ಪೂರ್ವ ಕಾಲೇಜು, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್‌ನ ವಿದ್ಯಾರ್ಥಿಗಳು ಭಕ್ತಿ ಸುಧೆಯ ಗೀತ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಮನೋ ವೈದ್ಯರಾದ ಡಾ.ವಿರೂಪಾಕ್ಷ ದೇವರಮನೆ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲ ರವಿ ಜಿ., ಹೇಮಂತ್, ಉಡುಪಿ ಜ್ಞಾನಸುಧಾ ಪಪೂ ಕಾಲೇಜು ಪ್ರಾಂಶುಪಾಲ ಸಂತೋಷ್, ಉಪಪ್ರಾಂಶುಪಾಲ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹಾಗೂ ಪಾಲಕರು ಪಾಲ್ಗೊಂಡರು. ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.