ಹೆಗ್ಗಳದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರ್ಚಕ ವಾಮನಮೂರ್ತಿ ಭಟ್ ಶಾರದಾ ಪೂಜೆ ಮಾಡಿದರು. 
ಜಿಲ್ಲೆ

ಸರ್ಕಾರಿ ಶಾಲೆಯಲ್ಲಿ ಶಾರದಾ ಪೂಜೆ

ಅಭಿನಯ್ ಎಚ್.ಎಂ

ವಿರಾಜಪೇಟೆ: ಸಮೀಪದ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶ್ರೀ ಶಾರದಾ ಪೂಜೆ ಶ್ರದ್ಧಾ-ಭಕ್ತಿಯಿಂದ ನೆರವೇರಿತು.

ಮುಂಜಾನೆಯಿಂದಲೇ ಪೂಜಾ ಕಾರ್ಯಕ್ರಮ ನೆರವೇರಿತು. ಅರ್ಚಕ ವಾಮನಮೂರ್ತಿ ಭಟ್ ನೇತೃತ್ವ ವಹಿಸಿದ್ದರು. ಸಂಕಲ್ಪ ಪೂಜೆ, ಶಾರದಾ ಮಾತೆಗೆ ಕುಂಕುಮಾರ್ಚನೆ, ಪುಷ್ಪಾರ್ಚನೆ, ಅಲಂಕಾರ ಪೂಜೆ ನೆರವೇರಿತು.

ಸರಸ್ವತಿ ಸ್ತೋತ್ರವನ್ನು ಪಠಿಸಿ ನೈವೇದ್ಯ ಪ್ರಸಾದವನ್ನು ಸಮರ್ಪಿಸಲಾಯಿತು. ಶಾಲೆ ಮಕ್ಕಳು, ಶಿಕ್ಷಕರು ಹಾಗೂ ಸಿಬ್ಬಂದಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಹಾಮಂಗಳಾರತಿ ನೆರವೇರಿಸಿದರು. ತದನಂತರ ಪ್ರಸಾದ ವಿತರಣೆ ನಡೆಯಿತು.

ಶಾಲೆ ಮುಖ್ಯ ಶಿಕ್ಷಕಿ ಹೇಮಲತಾ, ಎಸ್‌ಡಿಎಂಸಿ ಅಧ್ಯಕ್ಷ ರಾಜೇಶ್, ಸದಸ್ಯರು ಹಾಜರಿದ್ದರು.