ಕೊಪ್ಪಳದ ಶ್ರೀ ಶಾರದಾ ಇಂಟರ್ನಾಷನಲ್ ಶಾಲೆ ವಿದ್ಯಾರ್ಥಿಗಳು ವಿದೇಶಿ ಶಾಲೆ ಶಿಕ್ಷಕ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿರುವುದು.  
ಜಿಲ್ಲೆ

ಶಾಲಾ ಮಕ್ಕಳ ಸಾಂಸ್ಕೃತಿಕ ವಿಚಾರ ವಿನಿಮಯ

Kopala - Raveendra V K

ಕೊಪ್ಪಳ: ಅಂತಾರಾಷ್ಟ್ರೀಯ ಶಾಂತಿ ದಿನ ಅಂಗವಾಗಿ ಗುರುವಾರ ತಾಲೂಕಿನ ಕಿಡದಾಳ ಗ್ರಾಮದ ಶ್ರೀ ಶಾರದಾ ಇಂಟರ್ನಾಷನಲ್ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳು

ಉತ್ತರ ಅಮೇರಿಕಾ ಖಂಡದ ಡೊಮಿನಿಕನ್ ರಿಪಬ್ಲಿಕ್ ದೇಶದ ವಿದ್ಯಾರ್ಥಿಗಳೊಂದಿಗೆ ಆನ್‌ಲೈನ್ ಮೂಲಕ ಸಾಂಸ್ಕೃತಿಕ ವಿಚಾರ ವಿನಿಮಯ ಮಾಡಿಕೊಂಡರು.

ಪ್ರತಿಯೊಂದು ದೇಶದ ಸಂಸ್ಕೃತಿ, ಆಚಾರ-ವಿಚಾರಗಳು ಭಿನ್ನವಾಗಿರುತ್ತವೆ. ಉಡುಗೆ, ತೊಡುಗೆ, ಜೀವನಕ್ರಮ, ನಡೆ-ನುಡಿ ಬಗ್ಗೆ ತಿಳಿದುಕೊಳ್ಳಬೇಕು. ನಮ್ಮ ನಾಡಿನ ಸಾಂಸ್ಕೃತಿಕ ವೈವಿಧ್ಯತೆಯನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಮುಖ್ಯ.

ಎಲ್ಲ ಸಂಪ್ರದಾಯವನ್ನು ಗೌರವಿಸುವ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ವಿಶ್ವ ಭ್ರಾತೃತ್ವ ಸಾಧಿಸಬಹುದು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಈ ಚಟುವಟಕೆ ಹಮ್ಮಿಕೊಳ್ಳಲಾಗುತ್ತಿದೆ.

ಕಳೆದ ಎರಡು ವರ್ಷದಿಂದ ಬೆಲಾರಸ್, ಇಂಡೋನೇಷ್ಯಾ, ಫ್ರಾನ್ಸ್ ಸೇರಿ ಸುಮಾರು 15 ವಿದೇಶಿ ಶಾಲೆ ವಿದ್ಯಾರ್ಥಿಗಳೊಂದಿಗೆ ಶಾರದಾ ಶಾಲೆ ವಿದ್ಯಾರ್ಥಿಗಳು ವಿವಿಧ ವಿಷಯ ಹಂಚಿಕೊಂಡಿದ್ದಾರೆ

ಎಂದು ಶಾರದಾ ಸಂಸ್ಥೆ ಅಧ್ಯಕ್ಷ ವೀರನಗೌಡ ಪಾಟೀಲ್, ಕಾರ್ಯದರ್ಶಿ ಶರಣಗೌಡ ಪಾಟೀಲ್ ತಿಳಿಸಿದ್ದಾರೆ.