ಹರಿಕಥೆ ಕಾರ್ಯಕ್ರಮ ನಡೆಸಿಕೊಟ್ಟ ಹರಿದಾಸ ಶೇಣಿ ಮುರಳಿ ಅವರನ್ನು ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್, ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್.ನಾಯಕ್ ಮತ್ತು ಟ್ರಸ್ಟಿ ಉಸ್ತಾದ್ ರಫೀಕ್ ಖಾನ್ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. 
ಜಿಲ್ಲೆ

ಗಮನ ಸೆಳೆದ ‘ಶರಸೇತು ಬಂಧನ’ ಹರಿಕಥೆ : ವಳಚ್ಚಿಲ್ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಆಯೋಜನೆ

ಸೌಮ್ಯ ಆರ್

ಮಂಗಳೂರು: ವಳಚ್ಚಿಲ್ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ‘ಶರಸೇತು ಬಂಧನ’ ಹರಿಕಥೆ ಕಾರ್ಯಕ್ರಮ ಗಮನ ಸೆಳೆಯಿತು.

ಹರಿದಾಸ ಶೇಣಿ ಮುರಳಿ ನಡೆಸಿಕೊಟ್ಟ ಹರಿಕಥೆ ಕಾರ್ಯಕ್ರಮಕ್ಕೆ ಶ್ರೀಪತಿ ಭಟ್ ಬೆಳ್ಳೇರಿ(ಹಾರ್ಮೋನಿಯಂ), ಕೌಶಿಕ್ ಮಂಜನಾಡಿ(ತಬ್ಲಾ) ಸಹಕರಿಸಿದರು.

ಹರಿದಾಸ ಶೇಣಿ ಮುರಳಿ ಅವರನ್ನು ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್, ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್.ನಾಯಕ್ ಮತ್ತು ಟ್ರಸ್ಟಿ ಉಸ್ತಾದ್ ರಫೀಕ್ ಖಾನ್ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಮಾಹಿತಿ ತಂತ್ರಜ್ಞಾನ ನಿರ್ದೇಶಕ ಅಂಕುಶ್ ಎನ್.ನಾಯಕ್, ಆರ್ಕಿಟೆಕ್ಟ್ ದೀಪಿಕಾ ಎ.ನಾಯಕ್, ಪ್ರಾಂಶುಪಾಲ ಡಾ.ಎನ್.ಕೆ.ವಿಜಯನ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸನ್ಮತಿ ಸ್ವಾಗತಿಸಿದರು.