ಜಿಲ್ಲೆ

ಕರಾಟೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಸುನಿಲ್ ಪೊನ್ನೇಟಿ

ಕುಶಾಲನಗರ:

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮೈಸೂರಿನಲ್ಲಿ ಈಚೆಗೆ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾದ ಎಂ.ಬಿ. ಶರತ್ ಎಂಬ ವಿದ್ಯಾರ್ಥಿ ರಾಷ್ಟ್ರ ಮಟ್ಟಕ್ಕೆ ಅಯ್ಕೆ ಆಗಿದ್ದಾನೆ.

ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದ ಸುಶೀಲಾ ಭೀಮಯ್ಯನವರ ಪುತ್ರನಾಗಿರುವ ಈತ ಕೂಡಿಗೆ ಅಂಜೆಲಾ ವಿದ್ಯಾನಿಕೇತನ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಈತ ಮುಂದಿನ ತಿಂಗಳು ದೆಹಲಿಯಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾನೆ. ಕರಾಟೆ ಶಿಕ್ಷಕ ಪ್ರಮೋದ್ ತರಬೇತಿ ನೀಡಿದ್ದರು.