ಕೊಳ್ಳೇಗಾಲ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಬುಧವಾರ ಶ್ರೀ ಮಲೈ ಮಹದೇಶ್ವರ ಎಲೆಕ್ಟ್ರಿಕಲ್, ಪ್ಲಂಬಿಂಗ್ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕರ ದಿನ ಆಚರಿಸಲಾಯಿತು.
ಎಲೆಕ್ಟ್ರಿಕಲ್, ಪ್ಲಂಬಿಂಗ್ ಕಾರ್ಮಿಕರ ಸಂಘದ ಪದಾಧಿಕಾರಿಗಳು ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು. ವಕೀಲ ರಾಜೇಂದ್ರ ಮಾತನಾಡಿ, ಕಾರ್ಮಿಕರು ಈ ದೇಶದ ಆಸ್ತಿ. ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿ ಜೀವನ ರೂಪಿಸಿಕೊಂಡಿದ್ದಾರೆ. ತಮ್ಮ ಮಕ್ಕಳ ಭವಿಷ್ಯಕ್ಕೆ ಹೆಚ್ಚು ಒತ್ತು ನಿಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಹಾಗೆ ಕಾರ್ಮಿಕರ ಮಕ್ಕಳ ಅಭಿವೃದ್ಧಿಗಾಗಿ ಇರುವ ಸರ್ಕಾರ ಕಾರ್ಮಿಕರ ಕಲ್ಯಾಣ ನಿಧಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಂಘದ ಅಧ್ಯಕ್ಷ ಶಿವಮೂರ್ತಿ, ಗೌರವಧ್ಯಕ್ಷ ಸುಂದರ್, ಕಾರ್ಯದರ್ಶಿ ರಾಚಪ್ಪಾಜಿ, ಖಜಾಂಚಿ ಚಿನ್ನಸ್ವಾಮಿ, ನಿರ್ದೇಶಕ ಶಾಂತರಾಜು, ಸತೀಶ್ ಕುಮಾರ್, ಶಿವಣ್ಣ, ಮಹೇಶ್ ಇದ್ದರು.