ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭೆ ಮತಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಖಾನಾಪುರ ವಿಧಾನಸಭೆ ಕ್ಷೇತ್ರದ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆದೇಶ ಹೊರಡಿಸಿದ್ದಾರೆ.
ಮಾಧ್ಯಮಗಳಲ್ಲಿ ನಮ್ಮ ಪಕ್ಷದ ವಿಚಾರ, ದೃಷ್ಟಿಕೋನ ಪರಿಣಾಮಕಾರಿಯಾಗಿ ಜನರಿಗೆ ಬಿಂಬಿತವಾಗಬೇಕಿದೆ. ಹೀಗಾಗಿ, ತಕ್ಷಣವೇ ಅಧಿಕಾರ ವಹಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ. ನಮ್ಮ ಮೇಲೆ ವಿಶ್ವಾಸವನ್ನಿಟ್ಟು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಡಾ.ಅಂಜಲಿ ನಿಂಬಾಳ್ಕರ್ ಧನ್ಯವಾದ ಸಲ್ಲಿಸಿದ್ದಾರೆ.
ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯರಾಗಿ, ಪಕ್ಷದ ಅಭಿವೃದ್ಧಿ ಹಾಗೂ ಜನರ ಹಿತಕ್ಕಾಗಿ ಕೊಟ್ಟಂತಹ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತೇವೆ. ತಳಮಟ್ಟದಿಂದ ಕ್ಷವನ್ನು ಕಟ್ಟುವ ಕೆಲಸ ಮಾಡುತ್ತೇವೆ ಎಂದು
ಉಭಯ ಶಾಸಕಿಯರು ತಿಳಿಸಿದ್ದಾರೆ.