ಜಿಲ್ಲೆ

ಅಪಘಾತದಲ್ಲಿ ಬೈಕ್ ಸವಾರನ ಸಾವು

ಕುಶಾಲನಗರ:

ಸಮೀಪದ ಬೈಲಕುಪ್ಪೆ ಬಳಿ ರಾಷ್ಟಿçÃಯ ಹೆದ್ದಾರಿ 275ರಲ್ಲಿ ಮಂಗಳವಾರ ಬೆಳಗ್ಗೆ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಶಾಲನಗರ ಕರಿಯಪ್ಪ ಬಡಾವಣೆ ನಿವಾಸಿ ಡಿ.ಎನ್. ಶಶಿ (46) ಮೃತ ದುರ್ದೈವಿ. ಮಕ್ಕಳನ್ನು ಶಾಲೆಗೆ ಬಿಟ್ಟು ಕಾರ್ಯನಿಮಿತ್ತ ಬೈಲಕುಪ್ಪೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಲಾರಿ ಅಪ್ಪಳಿದ ರಭಸಕ್ಕೆ ಶಶಿ ಅವರ ತಲೆ ನಜ್ಜುಗುಜ್ಜಾಗಿದೆ. ಇವರು ದೇವಾಂಗ ಸಂಘದ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರಿಗೆ ಪತ್ನಿ ಮೂವರು ಗಂಡು ಮಕ್ಕಳು ಇದ್ದಾರೆ. ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.