ಜಿಲ್ಲೆ

ಯುಗಾದಿ ಹಬ್ಬದಂದೇ ಸಚಿವೆ ಶಶಿಕಲಾ ಜೊಲ್ಲೆಗೆ ಮಾತೃ ವಿಯೋಗ: ಇಂದು ಮಧ್ಯಾಹ್ನ ಅಂತ್ಯಕ್ರಿಯೆ

ಚಿಕ್ಕೋಡಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ತಾಯಿ ಸೇವಂತಾ ಹರದಾರೆ(84) ವಯೋಸಹಜ ಕಾಯಿಲೆಯಿಂದಾಗಿ ನಿಧನರಾಗಿದ್ದಾರೆ.

ಕಾಯಿಲೆ ಹಿನ್ನೆಲೆಯಲ್ಲಿ ಸೇವಂತಾ ಹರದಾರೆ ಅವರು ಕೊಲ್ಗಾಪುರದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಂದು (ಏಪ್ರಿಲ್​ 13) ಬೆಳಗಿನ ಜಾವ 4 ಗಂಟೆಗೆ ನಿಧನರಾಗಿದ್ದಾರೆ. ಹುಕ್ಕೇರಿ ತಾಲೂಕಿನ ಹಡಲಗಿ ಗ್ರಾಮದಲ್ಲಿ ಮಧ್ಯಾಹ್ನ‌ 12 ಗಂಟೆಗೆ ಅಂತ್ಯಕ್ರಿಯೆ ನೆರವೇರವೇರಲಿದೆ. (ದಿಗ್ವಿಜಯ ನ್ಯೂಸ್​)