ಜಿಲ್ಲೆ

ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಾರ್ಯಾಗಾರ : 91 ತಾಲೂಕು ಮಾಸ್ಟರ್, ಕ್ಯಾಪ್ಟನ್‌ಗಳಿಗೆ ಸಮವಸ್ತ್ರ, ಕ್ಯಾಪ್ ವಿತರಣೆ

ಸೌಮ್ಯ ಆರ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಧರ್ಮಸ್ಥಳ, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಡಾ.ಹೇಮಾವತಿ ವೀ.ಹೆಗ್ಗಡೆ ಅವರ ಮಾರ್ಗದರ್ಶನದೊಂದಿಗೆ, ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ಕಾರ್ಯಾಗಾರ ಉಜಿರೆ ಜಾಗೃತಿ ಸೌಧದಲ್ಲಿ ನಡೆಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್)ಯ ಟೀಮ್ ಕಮಾಂಡರ್ ಶಾಂತಿಲಾಲ್ ಜಟಿಯಾ ಕಾರ್ಯಗಾರ ಉದ್ಘಾಟಿಸಿ ಮಾಸ್ಟರ್, ಕ್ಯಾಪ್ಟನ್‌ಗಳಿಗೆ ಶೌರ್ಯ ಸಮವಸ್ತ್ರ ಹಾಗೂ ಕ್ಯಾಪ್‌ಗಳನ್ನು ವಿತರಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮಾಹಿತಿ ನೀಡಿದರು. ಎಸ್.ಡಿ.ಎಂ ಮೆಡಿಕಲ್ ಟ್ರಸ್ಟ್ ಕಾರ್ಯದರ್ಶಿ ಶಿಶುಪಾಲ್ ಪೂವಣಿ ಅಧ್ಯಕ್ಷತೆ ವಹಿಸಿದ್ದರು. ಉಷಾ ಫೈರ್ ಸೇಫ್ಟಿ ಕಂಪನಿಯ ತರಬೇತುದಾರ ಸಂತೋಷ್ ಪೀಟರ್ ಡಿಸೋಜ, ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಸುರೇಂದ್ರ, ಮೇಲ್ವಿಚಾರಕ ನಿತೇಶ್ ಕೆ. ರಾಜ್ಯದ 91 ತಾಲೂಕಿನ ಮಾಸ್ಟರ್ ಮತ್ತು ಕ್ಯಾಪ್ಟನ್‌ಗಳು ಉಪಸ್ಥಿತರಿದ್ದರು.

ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ್ ಪಟಗಾರ ಸ್ವಾಗತಿಸಿದರು. ಕಿಶೋರ್ ಕುಮಾರ್ ವಂದಿಸಿದರು. ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ನಿರೂಪಿಸಿದರು.