ಕೆ. ಗುಂಡಾಪುರ ಗ್ರಾಮದಲ್ಲಿ ಚಿರತೆ ದಾಳಿಯಿಂದ ಕುರಿ ಮೃತಪಟ್ಟ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.  
ಜಿಲ್ಲೆ

ಚಿರತೆ ದಾಳಿಗೆ ಕುರಿ ಬಲಿ

ಅಭಿನಯ್ ಎಚ್.ಎಂ

ಹನೂರು: ತಾಲೂಕಿನ ಕೆ.ಗುಂಡಾಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಚಿರತೆ ದಾಳಿಗೆ ಕುರಿ ಬಲಿಯಾಗಿದೆ.

ಗ್ರಾಮದ ರಂಗಸ್ವಾಮಿ ಅವರ ಜಮೀನಿನ ಕೊಟ್ಟಿಗೆಗೆ ಲಗ್ಗೆಯಿಟ್ಟ ಚಿರತೆ ಕುರಿಗಳ ಮೇಲೆ ದಾಳಿ ನಡೆಸಿದೆ. ಈ ವೇಳೆ ಕುರಿಗಳ ಚೀರಾಟದ ಶಬ್ದ ಕೇಳಿ ಅಕ್ಕಪಕ್ಕದ ರೈತರು ಸ್ಥಳಕ್ಕಾಗಮಿಸಿ ಕಿರುಚಿದಾಗ ಚಿರತೆ ಸ್ಥಳದಿಂದ ಪರಾರಿಯಾಗಿದೆ. ಅಷ್ಟರೊಳಗೆ ಕುರಿಯೊಂದು ಬಲಿಯಾಗಿದೆ.

ಈ ಬಗ್ಗೆ ಮಾಹಿತಿ ತಿಳಿಸಲಾಗಿ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿ ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು.