ಜಿಲ್ಲೆ

ನಿಜಗುಣರ ತತ್ವಗಳನ್ನು ಅಳವಡಿಸಿಕೊಳ್ಳಲು ಶೆಟ್ಟರ್ ಸಲಹೆ

ಹುಬ್ಬಳ್ಳಿ : ನಿಜಗುಣರ ತತ್ವಗಳು ಹಾಗೂ ಬಸವಣ್ಣನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.

ಇಲ್ಲಿನ ಶ್ರೀ ರುದ್ರಾಕ್ಷಿ ಮಠದಲ್ಲಿ 76ನೇ ವಾರ್ಷಿಕ ಶ್ರೀ ನಿಜಗುಣ ಶಿವಯೋಗಿಗಳ ಜಯಂತಿ ಉತ್ಸವ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ, ಮಾತನಾಡಿದರು.

ರುದ್ರಾಕ್ಷಿ ಮಠದ ಶ್ರೀ ಬಸವಲಿಂಗ ಸ್ವಾಮೀಜಿ ಹಾಗೂ ನವಲಗುಂದ ಗವಿಮಠದ ಅಭಿನವ ಬಸವಲಿಂಗ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.

ಶ್ರೀ ಬಸವಣ್ಣ ಅಜ್ಜನವರು ಅಧ್ಯಕ್ಷತೆ ವಹಿಸಿದ್ದರು. ಕಾರಂಜಿಮಠದ ಡಾ. ಶಿವಯೋಗಿ ದೇವರು ಹಾಗೂ ಗುಡಗುಂಟಿಯ ಶ್ರೀ ಸದಾನಂದ ಶಿವಾಚಾರ್ಯರು ಭಾಗವಹಿಸಿದ್ದರು. ಕಸಾಪ ಜಿಲ್ಲಾ ಅಧ್ಯಕ್ಷ ಲಿಂಗರಾಜ ಅಂಗಡಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಹಾಗೂ ಇತರರು ಹಾಜರಿದ್ದರು.

ಡಾ. ಸುನಿಲ ಕರಿ, ಡಾ.ಸಿದ್ದನಗೌಡ ಪಾಟೀಲ, ವಿಶ್ವನಾಥ ತಿರುಮಲ್ಲೆ ಅವರನ್ನು ಸನ್ಮಾನಿಸಲಾಯಿತು. ನಿಜಗುಣ ಶಿವಯೋಗಿಗಳ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಸಾವಕಾರ ಸ್ವಾಗತಿಸಿದರು.