ಜಿಲ್ಲೆ

ಬ್ರಹ್ಮರಥಕ್ಕೆ ಶಿಖರ ಮುಹೂರ್ತ

Avinash R

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಚೌತಿಯ ದಿನವಾದ ಗುರುವಾರ ಪಂಚಮಿ ರಥ ಮತ್ತು ಬ್ರಹ್ಮರಥಕ್ಕೆ ಶಿಖರ ಮುಹೂರ್ತ ನಡೆಯಿತು. ಕ್ಷೇತ್ರ ಪುರೋಹಿತ ಮಧುಸೂದನ ಕಲ್ಲೂರಾಯ ವೈದಿಕ ವಿದಿವಿಧಾನಗಳ ಮೂಲಕ ಶಿಖರ ಮುಹೂರ್ತ ನೆರವೇರಿಸಿ ಶಿಖರಗಳಿಗೆ ಪೂಜೆ ಸಮರ್ಪಿಸಿ ಪ್ರಸಾದ ವಿತರಿಸಿದರು. ಬಳಿಕ ಮೂಲನಿವಾಸಿ ಮಲೆಕುಡಿಯ ಜನಾಂಗದವರು ನೂತನ ಶಿಖರವನ್ನು ಬ್ರಹ್ಮರಥಕ್ಕೆ ಅಳವಡಿಸಿದರು. ಪಂಚಮಿ ರಥಕ್ಕೆ ಶಿಖರ ಅಳವಡಿಸಲಾಯಿತು.

ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್​, ದೇವಳದ ಹೆಬ್ಬಾರ್​ ಪ್ರಸನ್ನ ಭಟ್​, ಪಾಟಾಳಿ ಲೋಕೇಶ್​ ಎ.ಆರ್​., ಮೂಲನಿವಾಸಿ ಮಲೆಕುಡಿಯ ಜನಾಂಗದ ಗುರಿಕಾರ ಚಂದ್ರಶೇಖರ ಕೋಡಿಕಜೆ, ದೇವಳದ ಸಿಬ್ಬಂದಿ ಮತ್ತು ಭಕ್ತರು ಉಪಸ್ಥಿತರಿದ್ದರು.