ಜಿಲ್ಲೆ

ಕರೊನಾ ತಪಾಸಣಾ ಫಲಿತಾಂಶ ವೆಬ್‌ಸೈಟ್‌ನಲ್ಲಿ ಲಭ್ಯ: ಡಿಸಿ ಶಿವಕುಮಾರ್

ಶಿವಮೊಗ್ಗ: ಕರೊನಾ ತಪಾಸಣಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಆರ್‌ಟಿಪಿಸಿಆರ್ ಸ್ಯಾಂಪಲ್ ಪರೀಕ್ಷೆ ನಡೆಸಿ ಫಲಿತಾಂಶವನ್ನು ತಕ್ಷಣ ಐಸಿಎಂಆರ್ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲು ಸೂಚನೆ ನೀಡಲಾಗಿದೆ ಎಂದು ಡಿಸಿ ಕೆ.ಬಿ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲೆಯಲ್ಲಿ ಕಾಲೇಜುಗಳನ್ನು ಆರಂಭಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಕರೊನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಕರೊನಾ ತಪಾಸಣಾ ಫಲಿತಾಂಶವನ್ನು ನೇರವಾಗಿ ವೆಬ್‌ಸೈಟ್‌ನಲ್ಲಿ ಸಹ ವೀಕ್ಷಿಸಬಹುದು ಎಂದಿದ್ದಾರೆ.
ಕಾಲೇಜು ಅಥವಾ ಹಾಸ್ಟೆಲ್‌ಗೆ ಪ್ರವೇಶಿಸುವ 72 ಗಂಟೆ ಪೂರ್ವದಲ್ಲಿ ನಡೆಸಿದ ಆರ್‌ಟಿಪಿಸಿಆರ್ ತಪಾಸಣಾ ವರದಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕಾಗಿದೆ. ತಪಾಸಣಾ ವರದಿ ಐಸಿಎಂಆರ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಲಾಗಿರುವ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಕಳುಹಿಸಲಾಗುತ್ತಿದೆ. ಇದೇ ರೀತಿ ವರದಿಯನ್ನು https://covidwar.karnataka.gov.in/service1 ಲಾಗ್‌ಇನ್ ಆಗುವ ಮೂಲಕ ಪಡೆಯಬಹುದು ಎಂದು ಹೇಳಿದ್ದಾರೆ.