ಜಿಲ್ಲೆ

ಶಿರಾ ಉಪಚುನಾವಣೆಗೆ ಟಿ.ಬಿ.ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಕಾಂಗ್ರೆಸ್ ತೀರ್ಮಾನಿಸಿದೆ.

ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್​ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ನಡೆದ ತುಮಕೂರು ಜಿಲ್ಲಾ ಕಾಂಗ್ರೆಸ್​ ಮುಖಂಡರ ಸಭೆಯಲ್ಲಿ ಅಭ್ಯರ್ಥಿಯನ್ನಾಗಿ ಜಯಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, 'ರಾಜಣ್ಣ ಅವರೇ ಜಯಚಂದ್ರರ ಹೆಸರನ್ನು ಸೂಚಿಸಿದ್ದಾರೆ. ಅವರ ಅಭಿಪ್ರಾಯ ಪಡೆದಿದ್ದು, ಇದನ್ನೇ ಪಕ್ಷದ ಹೈಕಮಾಂಡ್​ಗೆ ಕಳುಹಿಸಿಕೊಡುತ್ತೇವೆ' ಎಂದು ತಿಳಿಸಿದರು. ಇದನ್ನೂ ಓದಿರಿ ಶಿರಾ ಬೈ ಎಲೆಕ್ಷನ್​; ಕಾಂಗ್ರೆಸ್​ ಸಭೆಯಲ್ಲಿ ಅಸಮಾಧಾನದ ಹೊಗೆ

'ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ನಾಯಕರೊಂದಿಗೆ ಸಮಾಲೋಚನೆ ನಡೆಸಲಾಯಿತು. ಶಿರಾ ಉಪಚುನಾವಣೆಯನ್ನು ಡಾ. ಜಿ.ಪರಮೇಶ್ವರ್ ನೇತೃತ್ವದಲ್ಲಿ ಎದುರಿಸಲು ತೀರ್ಮಾನಿಸಿದ್ದು, ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರು ಕೋಚೇರ್ಮನ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಎಲ್ಲ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಇಂದಿನಿಂದ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ' ಎಂದು ಡಿಕೆಶಿ ವಿವರಿಸಿದರು.