ರೇವತಗಾಂವ: ಸಮೀಪದ ಶಿರಾಡೋಣ ಗ್ರಾಮದ ರಮಾನಂದ ಭೀಮಾಶಂಕರ ಕುಲಕರ್ಣಿ ಅವರು ಭಾರತೀಯ ಸೇನೆಯಲ್ಲಿ ಸುದೀರ್ಘ 24 ವರ್ಷ ಭಾರತ ಮಾತೆಯ ಸೇವೆ ಸಲ್ಲಿಸಿ ನ.30 ರಂದು ಸೇವಾ ನಿವೃತ್ತಿ ಹೊಂದಿದ್ದು, ಸ್ವಗ್ರಾಮಕ್ಕೆ ಡಿ.3 ರಂದು ಬೆಳಗ್ಗೆ 10 ಗಂಟೆಗೆ ಆಗಮಿಸಲಿದ್ದಾರೆ. ಶಿರಾಡೋಣಕ್ಕೆ ಅವರ ಆಗಮನ ಹಿನ್ನೆಲೆಯಲ್ಲಿ ಗ್ರಾಮದ ಅಭಿಮಾನಿ ಬಳಗ ಹಾಗೂ ಗೆಳೆಯರ ಬಳಗದವರು ಸೇರಿ ವಿವಿಧ ಸಂಘಟನೆ ವತಿಯಿಂದ ಅದ್ದೂರಿ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅವರು ತಮ್ಮ ಸೇವಾವಧಿಯಲ್ಲಿ ಐದು ವರ್ಷ ಜಮ್ಮು-ಕಾಶ್ಮೀರದಲ್ಲಿ ಸೇವೆ ಸಲ್ಲಿಸಿದ್ದಾರೆ.