ಕಾರವಾರ: ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ಅವರು ವಿಶೇಷ ಪರಿಹಾರ ಘೋಷಿಸಿದ್ದಾರೆ. ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ವಿಶೇಷ ಪರಿಹಾರ ಮಂಜೂರು ಮಾಡಿರುವುದಾಗಿ ಪತ್ರ ಬರೆದಿದ್ದಾರೆ. ಆದರೆ, ಎಷ್ಟು ಪರಿಹಾರ ನೀಡಲಾಗುವುದು ಎಂಬುದನ್ನು ಷ್ಪಷ್ಟಪಡಿಸಿಲ್ಲ.
ಜುಲೈ 31 ರಂದು ಕಾಗೇರಿ ಅವರು ಪಿಎಂ ಅವರಿಗೆ ಮನವಿ ಮಾಡಿದ್ದರು. ಅದಕ್ಕೆ ಪತ್ರ ಮುಖೇನ ಪ್ರತಿಕ್ರಿಯಿಸಿರುವ ಮೋದಿ ಅವರು ಪರಿಹಾರ ಮಂಜೂರಾಗಿದೆ. ಮುಂದೆಯೂ ಎಲ್ಲ ರೀತಿಯ ಸಹಕಾರ ನಮ್ಮ ಸರ್ಕಾರದಿಂದ ಇರಲಿದೆ. ಅವಗಢದಲ್ಲಿ ತೊಂದರೆಗೊಳಗಾದವರಿಗೆ ನಮ್ಮ ಪ್ರಾರ್ಥನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಶಿರೂರು ಗುಡ್ಡ ಕುಸಿತದಲ್ಲಿ ಮೃತಪಟ್ಟವರಿಗೆ ವಿಶೇಷ ಪರಿಹಾರವನ್ನು ಘೋಷಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸತ್‌ನಲ್ಲಿಯೂ ಮಾತನಾಡಿ ಒತ್ತಾಯ ಮಾಡಿದ್ದರು. ಅಲ್ಲದೇ, ಪಶ್ಚಿಮ ಘಟ್ಟದಲ್ಲಿ ಹೊಸ ಯೋಜನೆಗಳನ್ನು ಜಾರಿ ಮಾಡುವುದಕ್ಕೂ ಪೂರ್ವ ಧಾರಣಾ ಸಾಮರ್ಥ್ಯ ಅಧ್ಯಯನ ಮಾಡಬೇಕು ಎಂದು ಒತ್ತಾಯಿಸಿದ್ದರು.
ಇದನ್ನೂ ಓದಿ