ಶ್ರೀಶೈಲ ಜಗದ್ಗುರು ಡಾ.ಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು  
ಜಿಲ್ಲೆ

ಶಿವಶಕ್ತಿ ಸಾಂಸ್ಕೃತಿಕ ಭವನ ಉದ್ಘಾಟನೆ 24ಕ್ಕೆ

ಸಿರಗುಪ್ಪ: ಶ್ರೀಶೈಲ ಪೀಠದ ಶಿವಶಕ್ತಿ ಸಾಂಸ್ಕೃತಿಕ ಭವನ ಉದ್ಘಾಟನೆ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಗರದಲ್ಲಿ ಅ.24 ರಂದು ಆಯೋಜಿಸಲಾಗಿದೆ ಎಂದು ಶ್ರೀಶೈಲ ಜಗದ್ಗುರು ಡಾ.ಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅ.24ರ ಬೆಳಗ್ಗೆ 10ಕ್ಕೆ ಶ್ರೀಶೈಲ ಪೀಠದ ಶಿವಶಕ್ತಿ ಸಾಂಸ್ಕೃತಿಕ ಭವನ ಉದ್ಘಾಟನೆ ನಡೆಯಲಿದೆ. ನಂತರ ಸರ್ವಧರ್ಮ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಸಾನ್ನಿಧ್ಯವನ್ನು ಉಜ್ಜಿನಿ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು, ಕಾಶಿ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರು ವಹಿಸಲಿದ್ದಾರೆ. ತೆಕ್ಕಲಕೋಟೆ ಕಂಬಾಳಿಮಠದ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮಗಳು ಜರುಗುತ್ತವೆ ಎಂದು ತಿಳಿಸಿದರು.

ಇದರ ಅಂಗವಾಗಿ ಅ.23 ರಂದು ಅಯ್ಯಚಾರ ಮತ್ತು ಲಿಂಗದೀಕ್ಷೆ ಜರುಗಲಿದೆ. ಅ.22ರಂದು ಮೂವರು ಜಗದ್ಗುರುಗಳಿಗೆ ತುಲಾಭಾರ, ಸೇವಾಕರ್ತೃಗಳಿಗೆ ಸತ್ಕಾರ ಸಮಾರಂಭ ನಡೆಯಲಿದೆ.ವಿವಿಧ ಮಠಗಳ ಮಠಾಧೀಶರು ಭಾಗವಹಿಸಲಿದ್ದಾರೆ. ಸಚಿವರಾದ ಎಂ.ಬಿ.ಪಾಟೀಲ್, ಶಿವರಾಜ ತಂಗಡಗಿ, ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ, ಶರಣ ಪ್ರಕಾಶ್ ಪಾಟೀಲ್ ಇತರರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.

ಈ ಸಂದರ್ಭ ವಿವಿಧ ಮಠಗಳ ಮಠಾಧೀಶರು ಸೇರಿದಂತೆ ಮಾಜಿ ಶಾಸಕ ಟಿ.ಎಂ. ಚಂದ್ರಶೇಖರಯ್ಯ, ಮುಖಂಡರಾದ ಟಿ.ಎಂ.ಸಿದ್ದರಾಮಯ್ಯ ಸ್ವಾಮಿ, ಜಡೆಪ್ಪ ಸ್ವಾಮಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಚೊಕ್ಕ ಬಸವನಗೌಡ, ಬಸವಲಿಂಗಪ್ಪ ಮಹಾಂತೇಶ ಸ್ವಾಮಿ ಇತರರಿದ್ದರು.