ಜಿಲ್ಲೆ

ಅದ್ಧೂರಿ ಶಿವಾಜಿ ಜಯಂತಿ ಮೆರವಣಿಗೆಗೆ ಚಾಲನೆ


ನಗರದ ನರಗುಂದಕರ ಭಾವೆ ಚೌಕದಲ್ಲಿ ಪಲ್ಲಕ್ಕಿಯಲ್ಲಿದ್ದ ಶಿವಾಜಿ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ದಕ್ಷಿಣ ಶಾಸಕ ಅಭಯ ಪಾಟೀಲ ಮತ್ತು ಮಹಾನಗರ ಪಾಲಿಕೆ‌ ಮೇಯರ್, ಉಪಮೇಯರ ಮೆರವಣಿಗೆಗೆ ಚಾಲನೆ ನೀಡಿದರು.
ಶನಿವಾರ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಅಂಗವಾಗಿ ಆರಂಭವಾದ ರೂಪಕ ವಾಹನಗಳ ಮೆರವಣಿಗೆ ಕಣ್ಮನ ಸೆಳೆಯಿತು. ಶಿವಾಜಿ ಇತಿಹಾಸ ಸಾರುವ ಕಲಾಕೃತಿಗಳು, ಜಾನಪದ ಕಲಾತಂಡಗಳ ಪ್ರದರ್ಶನ ಮೆರವಣಿಗೆ ಕಳೆ ಹೆಚ್ಚಿಸಿದವು.