ಉಡುಪಿ: ಛತ್ರಪತಿ ಶಿವಾಜಿಯ ಆದರ್ಶ, ಶಿಸ್ತು ಹಾಗೂ ದೇಶಾಭಿಮಾನ ಎಲ್ಲ ವಿದ್ಯಾರ್ಥಿಗಳಿಗೂ ಮಾದರಿಯಾಗಿದ್ದು, ಶಿವಾಜಿಯ ಆದರ್ಶಗಳನ್ನೆಲ್ಲ ಮೈಗೊಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.
ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕನ್ನಡ ಮತ್ತು ಸಂಸತಿ ಇಲಾಖೆ, ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ಹಾಗೂ ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರ ಸಂಘ ಉಡುಪಿ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಛತ್ರಪತಿ ಶಿವಾಜಿ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಹೋರಾಟದ ಕಿಚ್ಚು
ಕನ್ನಡ ಸಾಹಿತ್ಯ ಪರಿಷತ್ನ ಕಾಪು ತಾಲೂಕು ಅಧ್ಯಕ್ಷ ಪುಂಡಲೀಕ ಮರಾಠೆ, ಶಿವಾಜಿಯ ಕುರಿತು ಉಪನ್ಯಾಸ ನೀಡಿ, ಗೆರಿಲ್ಲಾ ಯುದ್ಧದ ಮೂಲಕ ಶತ್ರುಗಳನ್ನು ಸದೆಬಡಿದು ತನ್ನ ಸೈನ್ಯದ ಸಂಖ್ಯೆಯನ್ನು ಏರಿಸಿದ ಕೀರ್ತಿ ಶಿವಾಜಿಗೆ ಸಲ್ಲುತ್ತದೆ. ಅತ್ಯಂತ ಮಹತ್ವಾಕಾಂಕ್ಷಿ ನಾಯಕನಾಗಿದ್ದ ಶಿವಾಜಿ ಡಚ್ಚರು, ಪೋರ್ಚುಗೀಸರ ವಿರುದ್ಧ ಹೋರಾಡುವ ಮೂಲಕ ಸಾಂಕೇತಿಕವಾಗಿ ಸ್ವಾತಂತ್ರ$್ಯ ಹೋರಾಟದ ಕಿಚ್ಚು ಆರಂಭಿಸಿದ್ದರು ಎಂದರು.
ಜಿಲ್ಲಾ ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಶಾಲಾ ಮುಖ್ಯಶಿಕ್ಷಕಿ ಇಂದಿರಾ ಬಿ. ವಂದಿಸಿದರು. ಮಹೇಶ್ ಕಾರ್ಯಕ್ರಮ ನಿರೂಪಿಸಿದರು.
ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು. ಕನ್ನಡ ಗೀತಗಾಯನ ಕಾರ್ಯಕ್ರಮ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕರ್ನಾಟಕ ಕ್ಷತ್ರೀಯ ಮರಾಠ ಸಮುದಾಯದ ಅಧ್ಯಕ್ಷ ಪ್ರಕಾಶ್ ರಾವ್, ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರ ಸಂಘ ಉಡುಪಿಯ ಅಧ್ಯಕ್ಷ ದಿನೇಶ್ ಸಿ. ನಾಯಕ್ ಮೊರೆ, ಶಾಲೆಯ ಬೋಧಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.