ಜಿಲ್ಲೆ

ಶಿವಾಜಿ ಜಯಂತಿ, ಗಣ್ಯರಿಂದ ಶಿವಾಜಿ ಮೂರ್ತಿಗೆ ಮಾಲಾರ್ಪಣೆ

ಬೆಳಗಾವಿ: ಬೆಳಗಾವಿ ಜಿಲ್ಲಾಡಳಿತ, ಜಿಪಂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಬುಧವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವದ ಅಂಗವಾಗಿ ಶಿವಾಜಿ ಉದ್ಯಾನದಲ್ಲಿ ಸಂಸದ ಜಗದೀಶ ಶೆಟ್ಟರ್, ಶಾಸಕ ಅಭಯ್ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಜಿಪಂ ಸಿಇಒ ರಾಹುಲ್ ಶಿಂಧೆ ಶಿವಾಜಿ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಿ ಮಾಲಾರ್ಪಣೆ ಮಾಡಿದರು. ಪಾಲಿಕೆ ಆಯುಕ್ತೆ ಶುಭ ಬಿ., ಕನ್ನಡ ಸಂಸ್ಕೃತ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇತರರಿದ್ದರು.