ಜಿಲ್ಲೆ

ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಕರೊನಾ ಪಾಸಿಟಿವ್

mcbhadrashetti

ಬೆಂಗಳೂರು: ಶಿವಾಜಿನಗರ ಶಾಸಕ, ಕಾಂಗ್ರೆಸ್ ಮುಖಂಡ ರಿಜ್ವಾನ್ ಅರ್ಷದ್ ಅವರಿಗೆ ಕರೊನಾವೈರಸ್ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ನಿನ್ನೆ ಕರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಮನೆಯಲ್ಲೇ ಸೆಲ್ಪ್ ಕ್ವಾರಂಟೈನ್​ಗೆ ಒಳಗಾಗಿದ್ದೇನೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿರುವ ಅವರು, ಕರೊನಾ ಬಗ್ಗೆ ಭಯ ಬೇಡ. ಮಾಸ್ಕ್​ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಿ ಎಂದು ಕೋರಿದ್ದಾರೆ.

2019 ರ ಡಿಸೆಂಬರ್​ನಲ್ಲಿ ನಡೆದಿದ್ದ ಉಪ ಚುನಾವಣೆಯಲ್ಲಿ ಶಿವಾಜಿನಗರ ವಿಧಾನಸಭೆಯಿಂದ ರಿಜ್ವಾನ್ ಅರ್ಷದ್ ಅವರು ಸ್ಪರ್ಧಿಸಿ ಗೆದ್ದಿದ್ದರು.