ಜಿಲ್ಲೆ

ಶಿವಲೀಲಾ ಕುಲಕರ್ಣಿಗೆ ಮಂಡಳಿ ಅಧ್ಯಕ್ಷೆ ಹುದ್ದೆ

ಧಾರವಾಡ: ಕಾಂಗ್ರೆಸ್ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ದಸರಾ ಉಡುಗೊರೆ ನೀಡಿದೆ. ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷ- ನಿರ್ದೇಶಕರನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ. ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಈ ಹಿಂದೆ ಮಂಡಳಿ ಅಧ್ಯಕ್ಷ ಹುದ್ದೆಯನ್ನು ಶಾಸಕ ವಿನಯ ಕುಲಕರ್ಣಿ ಅವರಿಗೆ ವಹಿಸಲಾಗಿತ್ತು. ಇತ್ತೀಚೆಗೆ ಅವರ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಅಧ್ಯಕ್ಷ ಹುದ್ದೆಯನ್ನು ಶಿವಲೀಲಾ ಅವರಿಗೆ ವಹಿಸಲಾಗಿದೆ.

ವಿನಯ ಕುಲಕರ್ಣಿ ಅವರಿಗೆ ಜಿಲ್ಲಾ ಪ್ರವೇಶ ನಿರ್ಬಂಧವಿದೆ. ಹೀಗಾಗಿ ಅವರ ಪತ್ನಿ ಶಿವಲೀಲಾ ಅವರೇ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ್ದರು. ಇದಕ್ಕೆ ಬಿಜೆಪಿ ಮುಖಂಡರಿAದ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ಶಿವಲೀಲಾ ಅವರನ್ನು ರಾಜ್ಯ ಮಟ್ಟದ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿರುವುದರಿಂದ ಶಿಷ್ಟಾಚಾರ ಸಮಸ್ಯೆ ಎದುರಾಗದು.