ಜಿಲ್ಲೆ

ತರಬೇತಿ ವೇಳೆ Parachute ತೆರೆಯದೆ ಶಿವಮೊಗ್ಗ ಮೂಲದ ವಾಯುಪಡೆ ಅಧಿಕಾರಿ ಸಾವು

Webdesk - Manjunatha B

ಆಗ್ರಾ: ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ (Parachute) ತೆರೆದುಕೊಳ್ಳದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್‌ ಅಧಿಕಾರಿ ಮೃತಪಟ್ಟಿದ್ದಾರೆ. ಮೃತರನ್ನು ಜಿ.ಎಸ್. ಮಂಜುನಾಥ್‌ (36)  ಎಂದು ಗುರುತಿಸಲಾಗಿದೆ.

ಆಗ್ರಾದಲ್ಲಿ ಭಾರತೀಯ ವಾಯು ಸೇನೆಗೆ ಸೇರಿದ ಮಾಲ್ಪುರ ಪ್ಯಾರಾಚೂಟ್‌ (Parachute) ಡ್ರಾಪ್‌ ಜೋನ್‌ನಲ್ಲಿ ತರಬೇತಿ ನಡೆಯುತ್ತಿತ್ತು. ವಾಯುಸೇನೆಯ 12 ಅಧಿಕಾರಿಗಳು ಪ್ಯಾರಾಚೂಟ್‌ ತರಬೇತಿಗೆ ವಿಮಾನದಿಂದ ಜಿಗಿದಿದ್ದರು. 11 ಮಂದಿ ಮಾತ್ರ ಪ್ಯಾರಾಚೂಟ್‌ ಬಳಸಿ ಸುರಕ್ಷಿತವಾಗಿ ಲ್ಯಾಂಡ್‌ ಆಗಿದ್ದರು. ಆದರೆ ವಾರಂಟ್‌ ಆಫೀಸರ್‌ ಜಿ.ಎಸ್. ಮಂಜುನಾಥ್‌ ನಾಪತ್ತೆಯಾಗಿದ್ದರು. ಶೋಧ ಕಾರ್ಯ ನಡೆಸಿದಾಗ ಸಮೀಪದ ಜಮೀನಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಮಂಜುನಾಥ್ ಪತ್ತೆಯಾಗಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ್ ಅವರನ್ನು ಅಧಿಕಾರಿಗಳು ಕೂಡಲೇ ಆಸ್ಪತ್ರೆಗೆ ದಾಖಲಿಸಿದರಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಮಂಜುನಾಥ್ ತಂದೆ ಸುರೇಶ್‌, ತಾಯಿ ನಾಗರತ್ನ. ಕೃಷಿಕ ಕುಟುಂಬ. ಅವರಿಗೆ ಇಬ್ಬರು ಸಹೋದರಿಯರು, ಒಬ್ಬ ಸಹೋದರ ಇದ್ದಾರೆ.

ಘಟನೆ ಬಗ್ಗೆ ಶುಕ್ರವಾರ ಮಧ್ಯಾಹ್ನ ಮಂಜುನಾಥ್‌ ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಶನಿವಾರ ತಡರಾತ್ರಿ ಅವರ ಪಾರ್ಥೀವ ಶರೀರ ಹೊಸನಗರಕ್ಕೆ ಫೆಬ್ರವರಿ 09ಕ್ಕೆ ರವಾನೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

https://www.vijayavani.net/delhi-election-results-2025-visuals-of-aap-workers-celebrating-at-party-office-amid-counting-of-votes

https://www.vijayavani.net/unlikely-incidents-with-kumbha-sadhus-15-thousand-km-padayatra-the-achievement-of-aged-nagaraja-shetty