ಹೊಳೆಹೊನ್ನೂರಿನಲ್ಲಿ ಸಚಿವ ಮಧು ಬಂಗಾರಪ್ಪ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. ಶಾರದಾ ಪೂರ್ಯಾನಾಯ್ಕ್, ಸಿ.ಹನುಮಂತು, ಆರ್.ಉಮೇಶ್ ಇತರರಿದ್ದರು.
- ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಭಿಮತ
- ಇಂದಿರಾ ಕ್ಯಾಂಟೀನ್ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
- ಹಸಿದ ಹೊಟ್ಟೆಗೆ ಅನ್ನ ನೀಡುವುದು ಪುಣ್ಯದ ಕೆಲಸ
ಹೊಳೆಹೊನ್ನೂರು: ಜಿಲ್ಲೆಯಲ್ಲಿ ಈವರೆಗೆ 16 ಇಂದಿರಾ ಕ್ಯಾಂಟೀನ್ಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಪಪಂ ಸಮೀಪದ ಗಾಂಧಿ ವೃತ್ತದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಇಂದಿರಾ ಕ್ಯಾಂಟೀನ್ಗಳು ಕೂಲಿ ಕಾರ್ಮಿಕರಿಗೆ ಆರ್ಥಿಕವಾಗಿ ಸಹಕಾರಿಯಾಗಿವೆ. ಹಸಿದ ಹೊಟ್ಟೆಗೆ ಅನ್ನ ನೀಡುವುದು ಪುಣ್ಯದ ಕೆಲಸ. ಇಂದಿರಾ ಕ್ಯಾಂಟೀನ್ ಆಹಾರವನ್ನು ಸಾರ್ವಜನಿಕರು, ಅಧಿಕಾರಿಗಳು ಪರಿಶೀಲಿಸಬೇಕು. ರಾಜ್ಯದ ಸರ್ಕಾರಿ ಶಾಲೆಯಲ್ಲಿರುವ 57 ಲ ಮಕ್ಕಳಿಗೆ ಬಿಸಿಯೂಟ ನೀಡಲಾಗುತ್ತಿದೆ. ಆಹಾರದ ಗುಣಮಟ್ಟ ಉತ್ತಮವಾಗಿರುವಂತೆ ಯೋಜನೆಗಳ ಅನುಷ್ಠಾನದ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಬೈಪಾಸ್ ನಿರ್ಮಾಣದ ನಂತರ ಹೊಳೆಹೊನ್ನೂರಿಗೆ ಸಾರಿಗೆ ಬಸ್ಗಳು ಬರುತ್ತಿಲ್ಲ ಎನ್ನಲಾಗುತ್ತಿದೆ. ಆರೋಗ್ಯ ಕೇಂದ್ರದ ವೈದ್ಯರನ್ನು ವರ್ಗಾವಣೆ ಮಾಡುವುದನ್ನು ಕೂಡಲೆ ತಡೆಯಲಾಗುವುದು. ಯಾವ ಕಾರಣಕ್ಕೂ ಸರ್ಕಾರಿ ವ್ಯವಸ್ಥೆ ಹಾಳಾಗುವುದಕ್ಕೆ ಬಿಡುವುದಿಲ್ಲ ಎಂದರು.
ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಜನರಿಗೆ ಉತ್ತಮವಾಗಿ ಸ್ಪಂದಿಸಬೇಕು. ಬಜೆಟ್ನಲ್ಲಿ ಶಿಣ ಇಲಾಖೆಗೆ 47 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. ಸರ್ಕಾರಿ ಶಾಲೆಯನ್ನು ಉನ್ನತಿಕರಿಸಲಾಗುತ್ತಿದ್ದು ಪೂರ್ವ ಪ್ರಾಥಮಿಕ ಶಾಲೆಗಳನ್ನು ತೆರೆಯಲಾಗುವುದು. ಕೌಶಲಗಳನ್ನು ಕಲಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತರಾಗಬೇಕು. ಸುಸಜ್ಜಿತವಾದ ಕಟ್ಟಡದಲ್ಲಿ ಮಕ್ಕಳು ಕಲಿಯುವಂತಾಗಬೇಕು. ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಆಸ್ಪತ್ರೆ ಸಮಸ್ಯೆ ಶ್ರೀ ಪರಿಹರಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯ ಸಿ.ಹನುಮಂತು, ಪಪಂ ಮುಖ್ಯಾಧಿಕಾರಿ ಮಂಜುನಾಥ್, ಮಾಜಿ ಗ್ರಾಪಂ ಅಧ್ಯ ಆರ್.ಉಮೇಶ್, ಶ್ರೀನಿವಾಸ್ ಕರಿಯಣ್ಣ, ಕೆ.ಆರ್.ಶ್ರೀಧರ್, ದೇವಿಕುಮಾರ್, ಸೀತಾರಾಮು, ವಿಜಯ್ಕುಮಾರ್, ಎಂ.ಜಿ.ಗುರುಮೂರ್ತಿ, ನಾಗೇಶ್, ನಿರ್ಮಲಾ, ಹರೀಶ್, ದೇವಾನಂದ, ಕಗ್ಗಿ ಮಲ್ಲೇಶ್ ಇತರರಿದ್ದರು.
ಪಪಂ ವ್ಯಾಪ್ತಿಯಲ್ಲಿ ಕ್ಯಾಂಟೀನ್ ಉದ್ಘಾಟನೆಯಾಗಿರುವುದು ಆಶಾದಾಯಕ ಬೆಳವಣಿಗೆ. ಆಹಾರದ ಗುಣಮಟ್ಟ ಕಾಪಾಡಿಕೊಳ್ಳಬೇಕು. ಶುಚಿತ್ವ ಕಾಪಾಡಿಕೊಂಡರೆ ಕಾಯಿಲೆಗಳಿಂದ ದೂರಾಗಬಹುದು. ಅಧಿಕಾರಿಗಳಿಗೆ ಕೆಳಹಂತದ ಜನರ ಕಷ್ಟಗಳ ಅರಿವಾಗಬೇಕಿದೆ. ಆಸ್ಪತ್ರೆಯ ವೈದ್ಯಾಧಿಕಾರಿಯನ್ನು ಬೇರೆಡೆ ವರ್ಗಾವಣೆ ಮಾಡುವುದಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಶಾಸಕಿ ಶಾರದಾ ಪೂರ್ಯಾನಾಯ್ಕ್ ಹೇಳಿದರು.