ಸೊರಬದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪಿ.ಲಲಿತಾ, ಡಿ.ಬಿ.ಮಂಜಪ್ಪ, ಭರತ್‌ಕುಮಾರ್ ಇತರರಿದ್ದರು.
ಸೊರಬ: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಚಿಂತನೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಡಿ.ಬಿ.ಮಂಜಪ್ಪ ಹೇಳಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ, ತಾಲೂಕು ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವದಲ್ಲಿ ಮಾತನಾಡಿ, ಕೆಂಪೇಗೌಡರ ಚಿಂತನೆ ಫಲವಾಗಿ ಬೆಂಗಳೂರು ನಿರ್ಮಾಣವಾಗಿದೆ. ಕೆಂಪೇಗೌಡರ ಆಲೋಚನೆ ಆಡಳಿತಗಾರರಿಗೆ ಮಾದರಿಯಾಗಬೇಕು ಎಂದು ತಿಳಿಸಿದರು.
ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಭರತ್‌ಕುಮಾರ್ ಮಾತನಾಡಿ, ನಾಡಪ್ರಭು ಕೆಂಪೇಗೌಡರು ಅಂದಿನ ಕಾಲದಲ್ಲೇ ಬೆಂಗಳೂರನ್ನು ಸುಂದರ ನಗರವನ್ನಾಗಿ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಅಡಿಪಾಯ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ನಿರ್ಮಾಣವಾಗಿದೆ. ಅಂದು ಅವರ ಕಾಲದಲ್ಲಿಯೇ ಅಡಿಪಾಯ ಹಾಕಿದ ನಗರಗಳು ಇಂದು ಬಹುಪ್ರಾಮುಖ್ಯತೆ ಹೊಂದಿದ ನಗರ ಆಗಿದೆ ಎಂದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಗ್ರೇಡ್ 2 ತಹಸೀಲ್ದಾರ್ ಪಿ.ಲಲಿತಾ, ಸಂಘದ ತಾಲೂಕು ಗೌರವಾಧ್ಯಕ್ಷ ಉಮಾಕಾಂತ್, ರಾಧಾ, ಉಮೇಶ್ ಭದ್ರಾಪುರ, ಕಾರ್ಯದರ್ಶಿ ಕೃಷ್ಣಪ್ಪ, ಭೈರಪ್ಪ, ರಕ್ಷಾಶ್ರೀ, ಮಹೇಶ್ ಖಾರ್ವಿ, ರಾಮಪ್ಪ, ವಿನಯ್ ಇತರರಿದ್ದರು.