ಹೊಸನಗರ ತಾಪಂ ಸಭಾಂಗಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಚಿದಂಬರ್ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಭೆ ನಡೆಯಿತು. ಸಂತೋಷ್, ಅನಿಲ್, ಕರುಣಾಕರ ಇತರರಿದ್ದರು. 
ಶಿವಮೊಗ್ಗ

ಗ್ಯಾರಂಟಿ ಯೋಜನೆ ಅನರ್ಹರ ಪತ್ತೆಗೆ ಕ್ರಮ

ಹೊಸನಗರ: ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ. ಯಾವ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಚಿದಂಬರ ಹೂವಿನಕೋಣೆ ಹೇಳಿದರು.
ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಅನರ್ಹರು ಮತ್ತು ನಕಲಿ ಫಲಾನುಭವಿಗಳನ್ನು ಹೊರಗಿಡುವ ಪ್ರಕ್ರಿಯೆ ನಡೆಯುತ್ತಿದೆ. ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದೆ. ಈಗಾಗಲೇ ಎಂಟು ಫಲಾನುಭವಿಗಳು ವಾಸಸ್ಥಳದಲ್ಲಿ ಇಲ್ಲದೆ ಇರುವುದು ಖಚಿತಗೊಂಡಿದ್ದು, ಅವರನ್ನು ಯೋಜನೆಯಿಂದ ಕೈಬಿಡಲಾಗಿದೆ ಎಂದರು.
ತೆರಿಗೆ ಪಾವತಿದಾರರು, ಮೃತಪಟ್ಟವರ ಹೆಸರಿನಲ್ಲಿ ಹಣ ಪಡೆಯುತ್ತಿರುವವರು ಹಾಗೂ ಇತರ ರಾಜ್ಯಗಳ ನಿವಾಸಿಗಳಂತಹ ಅನರ್ಹರನ್ನು ಪತ್ತೆ ಹಚ್ಚಲಾಗುವುದು. ದುರ್ಬಳಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಂದ ಮನೆ ಮನೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
110 ಕೆವಿ ವಿದ್ಯುತ್ ಸಂಪರ್ಕ ವ್ಯವಸ್ಥೆ ಹಾಗೂ ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಆರಂಭಿಸಲು ಸ್ಥಳ ಗುರುತಿಸಿದ್ದು, ಈಗಾಗಲೇ ಸರ್ವೇ ಕಾರ್ಯ ಮುಕ್ತಾಯಗೊಂಡಿದೆ. ಮುಂದಿನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದರು.
ಸದಸ್ಯರಾದ ಸಂತೋಷ್, ಅನಿಲ್, ಕರುಣಾಕರ, ನರಸಿಂಹ ಪೂಜಾರಿ, ರಮೇಶ್, ರವಿ, ಪೂರ್ಣಿಮಾ, ಅಕ್ಷತಾ ನಾಗರಾಜ್, ಸುಮಂಗಲಾ, ಮಹೇಂದ್ರ ಇತರರಿದ್ದರು.