ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಆಯನೂರು ಮಂಜುನಾಥ್ ಮಾತನಾಡಿದರು.
- 17ರಂದು ಶ್ರೀ ಜಗದ್ಗುರು ಪಂಚ ಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ
- ಉತ್ಸವಕ್ಕಾಗಿ ನಡೆದಿದೆ ಇಡೀ ನಗರವನ್ನು ಶೃಂಗರಿಸುವ ಕೆಲಸ
- 20ರಿಂದ 25 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ
ಶಿವಮೊಗ್ಗ: ನಗರದ ಅಲ್ಲಮಪ್ರಭು ಮೈದಾನದಲ್ಲಿ ಮೇ 17ರಂದು ಶ್ರೀ ಜಗದ್ಗುರು ಪಂಚ ಪೀಠಾಧೀಶ್ವರರ(Panch Peethadheeshwara) ಅಡ್ಡ ಪಲ್ಲಕ್ಕಿ ಮಹೋತ್ಸವ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃತಜ್ಞತಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಆಯನೂರು ಮಂಜುನಾಥ್ ಹೇಳಿದರು.
34 ವರ್ಷದ ಬಳಿಕ ಆಯೋಜಿಸುತ್ತಿರುವ ಅಡ್ಡಪಲ್ಲಕ್ಕಿ ಮಹೋತ್ಸವ(Addapallakki Mahotsava)ದಲ್ಲಿ 20ರಿಂದ 25 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ವಿವಿಧ ತಾಲೂಕು ಹಾಗೂ ಗ್ರಾಮಗಳಿಂದ ಬಸ್‌ಗಳಲ್ಲಿ ಸಮಾಜದವರು ಆಗಮಿಸುವರು. ಉತ್ಸವಕ್ಕಾಗಿ ಇಡೀ ನಗರವನ್ನು ಶೃಂಗರಿಸುವ ಕೆಲಸ ನಡೆದಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೇ 17ರಂದು ಮಧ್ಯಾಹ್ನ 3ಕ್ಕೆ ಗಾಂಧಿಬಜಾರ್‌ನ ಬಸವೇಶ್ವರ ದೇವಸ್ಥಾನದ ಆವರಣದಿಂದ ಅಡ್ಡಪಲ್ಲಕ್ಕಿ ಉತ್ಸವ ಪ್ರಾರಂಭವಾಗಲಿದೆ. ಪೂರ್ಣಕುಂಭದೊಂದಿಗೆ ನೂರಾರು ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು. ಹತ್ತಕ್ಕೂ ಹೆಚ್ಚು ಕಲಾ ತಂಡಗಳು ಹೆಜ್ಜೆ ಹಾಕಲಿವೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಲಕ್ಷ್ಮಿ ಟಾಕೀಸ್ ಬಳಿಯಿಂದ ತೆರೆದ ಜೀಪ್‌ನಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಕರೆದೊಯ್ಯಲಾಗುವುದು ಎಂದರು.
ಸಂಜೆ 6ಕ್ಕೆ ಅಲ್ಲಮಪ್ರಭು(Allama Prabhu)ಬಯಲಿನಲ್ಲಿ ಧರ್ಮ ಜಾಗೃತಿ ಸಭೆ ಹಾಗೂ ಕೃತಜ್ಞತಾ ಸರ್ಮಣಾ ಸಮಾರಂಭ ಜರುಗಲಿದೆ. ಮಹೋತ್ಸವ ಸಮಿತಿ ಅಧ್ಯಕ್ಷ ಬಿ.ವೈ.ರಾಘವೇಂದ್ರ, ಶಾಸಕ ಬಿ.ಕೆ.ಸಂಗಮೇಶ್, ಮಾಜಿ ಎಂಎಲ್‌ಸಿ ಎಸ್.ರುದ್ರೇಗೌಡ, ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಮಾಜದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಭಾಗವಹಿಸುವರು ಎಂದು ತಿಳಿಸಿದರು.
ಬಿ.ಎಸ್.ಯಡಿಯೂರಪ್ಪಗೆ ಕೃತಜ್ಞತೆ ಸಲ್ಲಿಕೆ
ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿರುವ ಬಿ.ಎಸ್.ಯಡಿಯೂರಪ್ಪ(B.S. Yediyurappa)ಅವರಿಗೆ ಕೃತಜ್ಞತೆ ಸಲ್ಲಿಸಿ ಗೌರವಿಸಲಾಗುವುದು. ನಂತರ ಸಮಾರಂಭದಲ್ಲಿ ಪಂಚಪೀಠಾಧೀಶ್ವರರು ಆಶೀರ್ವಚನ ನೀಡುವರು. ಸಂಜೆ 4.30ಕ್ಕೆ ನಗರದ ಮಹಿಳಾ ಬಳಗದಿಂದ ಭಕ್ತಿ ಗಾಯನ ಮತ್ತು ಶ್ರೀ ಸಿದ್ಧಾಂತ ಶಿಖಾಮಣಿ ಪಾರಾಯಣ ನಡೆಯಲಿದೆ ಎಂದು ಆಯನೂರು ಮಂಜುನಾಥ್ ಹೇಳಿದರು. ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಬಳ್ಳೇಕೆರೆ ಸಂತೋಷ್, ಪ್ರಮುಖರಾದ ಎಸ್.ರುದ್ರೇಗೌಡ, ಎಂ.ಆರ್.ಪ್ರಕಾಶ್, ಅನಿತಾ ರವಿಶಂಕರ್, ಎಚ್.ವಿ.ಮಹೇಶ್ವರಪ್ಪ, ಜಗದೀಶ್, ಮರುಳೇಶ್, ರೇಣುಕಾರಾಧ್ಯ, ವಿರುಪಾಕ್ಷಪ್ಪ, ಪ್ರದೀಪ್ ಎಲಿ ಸುದ್ದಿಗೋಷ್ಠಿಯಲ್ಲಿದ್ದರು.
"
ಅಡ್ಡಪಲ್ಲಕ್ಕಿ ಮಹೋತ್ಸವ ಸಮಾರಂಭದಲ್ಲಿ ಪಂಚಪೀಠಗಳು ಒಳಗೊಂಡಂತೆ 48 ಮಠಾಧೀಶರು ಪಾಲ್ಗೊ Imageಳ್ಳುವರು. 34 ವರ್ಷದ ನಂತರ ಶಿವಮೊಗ್ಗದಲ್ಲಿ ಮಹೋತ್ಸವ ನಡೆಯುತ್ತಿರುವುದರಿಂದ ಇಡೀ ಜಿಲ್ಲೆಯಲ್ಲಿ ಹಬ್ಬದ ವಾತಾವರಣ ಇದ್ದು, ಎಲ್ಲಧರ್ಮದವರೂ ಬಂದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು.
— ಸಿ.ಎಸ್.ಷಡಾಕ್ಷರಿ, ಸಮಿತಿ ಪ್ರಧಾನ ಕಾರ್ಯದರ್ಶಿ