ಸಾಗರದ ಎಲ್‌ಬಿ ಮತ್ತು ಎಸ್‌ಬಿಎಸ್ ಕಾಲೇಜಿನ ಎದುರು ಪ್ರಯಾಣಿಕರ ತಂಗುದಾಣ ನಿರ್ಮಿಸುವಂತೆ ಒತ್ತಾಯಿಸಿ ಎಬಿವಿಪಿ ಪದಾಧಿಕಾರಿಗಳಾದ ಎಚ್.ಜಿ.ಮೋಹನ್, ಡಿ.ಸುಜಿತ್, ಪ್ರಜ್ವಲ್, ನಿತಿನ್‌ಕುಮಾರ್ ಉಪವಿಭಾಗಾಧಿಕಾರಿ ವೀರೇಶ್‌ಕುಮಾರ್‌ಗೆ ಮನವಿ ಸಲ್ಲಿಸಿದರು.
ಸಾಗರ: ಸಾಗರದ ಎಲ್‌ಬಿ ಮತ್ತು ಎಸ್‌ಬಿಎಸ್ ಕಾಲೇಜಿನ ಎದುರು ಪ್ರಯಾಣಿಕರ ತಂಗುದಾಣ ನಿರ್ಮಿಸುವಂತೆ ಒತ್ತಾಯಿಸಿ ಎಬಿವಿಪಿ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ವೀರೇಶ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಎಲ್‌ಬಿ ಆ್ಯಂಡ್ ಎಸ್‌ಬಿಎಸ್ ಕಾಲೇಜು ಹಾಗೂ ಜಿ.ಎ.ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿದ್ದಾರೆ. ಬಿ.ಇಡಿನಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಬೇರೆಬೇರೆ ಊರುಗಳಿಂದ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಈ ಹಿಂದೆ ಕಾಲೇಜಿನ ಎದುರು ಸುಸಜ್ಜಿತ ಪ್ರಯಾಣಿಕರ ತಂಗುದಾಣವಿತ್ತು. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ತಂಗುದಾಣವನ್ನು ಕೆಡವಲಾಗಿದೆ. ಇದರಿಂದ ವಿದ್ಯಾರ್ಥಿಗಳು ಬಿಸಿಲು ಮತ್ತು ಮಳೆಗಾಲದಲ್ಲಿ ಬಸ್‌ಗಾಗಿ ಕಾಯಲು ಸೂಕ್ತ ವ್ಯವಸ್ಥೆ ಇಲ್ಲ. ತಕ್ಷಣ ತಂಗುದಾಣ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ಸದಸ್ಯ ಎಚ್.ಜಿ.ಮೋಹನ್, ಡಿ.ಸುಜಿತ್, ಪ್ರಜ್ವಲ್, ನಿತಿನ್‌ಕುಮಾರ್ ಇತರರಿದ್ದರು.