ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಚ್.ಸಿ.ಯೋಗೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಎಂ.ಎಸ್.ಶಿವಕುಮಾರ್, ಕಲೀಂ ಪಾಷಾ, ಮುನಾರ್ ಪಾಷಾ, ಮಧುಸೂದನ್ ಇದ್ದರು. 
ಶಿವಮೊಗ್ಗ

ತುಂಗಾ ಸೇತುವೆ ನಿರ್ಮಾಣಕ್ಕೆ ಸತೀಶ್ ಜಾರಕಿಹೊಳಿಗೆ ಮನವಿ | Tunga Bridge

ಪ್ರಮುಖ ಮುಖ್ಯಾಂಶಗಳು

  • ತುಂಗಾ ಹಳೇ ಸೇತುವೆ ಶಿಥಿಲವಾಗುತ್ತಿದ್ದು, ಹೊಸ ಸೇತುವೆ ನಿರ್ಮಿಸುವಂತೆ ಒತ್ತಾಯ
  • ಬೆಂಗಳೂರಿನಲ್ಲಿ ಎಚ್.ಸಿ.ಯೋಗೇಶ್ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವರಿಗೆ ಮನವಿ
  • ಹಳೇ ಸೇತುವೆ ಜಾಗದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ 40 ಕೋಟಿ ರೂ. ಬಿಡುಗಡೆಗೆ ಒತ್ತಾಯ
ಶಿವಮೊಗ್ಗ: ತುಂಗಾ ಹಳೇ ಸೇತುವೆ(Tunga Old Bridge) ಶಿಥಿಲವಾಗುತ್ತಿದ್ದು, ಹೊಸ ಸೇತುವೆ ನಿರ್ಮಿಸುವಂತೆ ಒತ್ತಾಯಿಸಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಚ್.ಸಿ.ಯೋಗೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Satish Jarakiholi) ಅವರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗಕ್ಕೆ ಮಹಾದ್ವಾರದಂತಿರುವ ತುಂಗಾ ನದಿ(Tunga river) ಸೇತುವೆಗೆ ಸುಮಾರು ನೂರು ವರ್ಷಗಳಾಗಿವೆ. ತುಂಗಾ ನದಿಯನ್ನು ದಾಟಿ ಬೇರೆ ಬೇರೆ ನಗರಗಳಿಗೆ ಸಂಪರ್ಕ ಒದಗಿಸಿ ಪ್ರಯಾಣಿಸಲು ಸೇತುವೆ ಅನುಕೂಲವಾಗಿದೆ. 2019ರಲ್ಲಿ ಆದಂತಹ ಭಾರಿ ಮಳೆಗೆ ಸೇತುವೆ ಬಹಳಷ್ಟು ಹಾನಿಗೀಡಾಗಿದೆ. ತಾತ್ಕಾಲಿಕವಾಗಿ ಸರ್ಕಾರದಿಂದ ಕಾಮಗಾರಿ ಮಾಡಲಾಗಿದೆ ಎಂದು ಸಚಿವರು ಗಮನಕ್ಕೆ ತಂದರು.
2026-27ನೇ ಸಾಲಿನ ಬಜೆಟ್‌ನಲ್ಲಿ 2 ಸಾವಿರ ಕೋಟಿ ರೂ.ಗಳನ್ನು ರಾಜ್ಯಾದ್ಯಂತ ಸೇತುವೆಗಳ ನಿರ್ಮಾಣಕ್ಕೆ ಮೀಸಲಿಟ್ಟಿದ್ದು, ಹಳೇ ಸೇತುವೆ ಜಾಗದಲ್ಲಿ ಹೊಸ ಸೇತುವೆ(New Bridge) ನಿರ್ಮಾಣಕ್ಕೆ 40 ಕೋಟಿ ರೂ. ವೆಚ್ಚ ತಗುಲುತ್ತದೆ. ಆದ್ದರಿಂದ ಈ ಹಣವನ್ನು ಬಿಡುಗಡೆಗೊಳಿಸಿ ತಕ್ಷಣ ಕಾಮಗಾರಿಗೆ ಚಾಲನೆ ನೀಡಬೇಕೆಂದು ಒತ್ತಾಯಿಸಿದರು.
ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಶಿವಕುಮಾರ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷಾ, ಜಾಮಿಯಾ ಮಸೀದಿ ಅಧ್ಯಕ್ಷ ಮುನಾರ್ ಪಾಷಾ, ಮಧುಸೂದನ್ ಇತರರಿದ್ದರು.