ಸಾಗರ ಎಸಿ ಕಚೇರಿಯಲ್ಲಿ ಸ್ವಾತಂತ್ರೃ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ವೀರೇಶ್‌ಕುಮಾರ್, ಡಾ. ಆರ್.ಪ್ರತಿಭಾ, ನಾಗಪ್ಪ ಇದ್ದರು. 
ಶಿವಮೊಗ್ಗ

ಪ್ಲಾಸ್ಟಿಕ್ ಧ್ವಜ ಬಳಕೆಗೆ ನಿಷೇಧ

ಸೋಮಶೇಖರ ಎನ್
ಸಾಗರ: ಸ್ವಾತಂತ್ರೃ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ವೀರೇಶ್‌ಕುಮಾರ್ ಹೇಳಿದರು.
ಸಾಗರ ಎಸಿ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸ್ವಾತಂತ್ರೃ ದಿನ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಬೆಳಗ್ಗೆ 9ಕ್ಕೆ ನೆಹರು ಮೈದಾನದಲ್ಲಿ ಧ್ವಜಾರೋಹಣ ನೆರವೇರಲಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆ ವಹಿಸುವರು. ವಿವಿಧ ತುಕಡಿಗಳಿಂದ ಪಥ ಸಂಚಲನ ನಡೆಯಲಿದೆ ಎಂದು ತಿಳಿಸಿದರು.
ಸ್ವಾತಂತ್ರೃ ದಿನಾಚರಣೆ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಧ್ವಜ ಬಳಕೆ, ಮಾರಾಟ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದರು. ತಹಸೀಲ್ದಾರ್ ಡಾ. ಆರ್.ಪ್ರತಿಭಾ, ಪೌರಾಯುಕ್ತ ಎಚ್.ಕೆ.ನಾಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಮದನ್, ಶಿವಪ್ರಕಾಶ್, ಶಾಂತರಾಜ್ ಇತರರಿದ್ದರು.