ರಾಜ್ಯಮಟ್ಟಕ್ಕೆ ಆಯ್ಕೆಯಾದ ಭದ್ರಾವತಿ ತಾಲೂಕಿನ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಅಭಿನಂದಿಸಿದರು. ಎಂ.ಎಸ್.ಸುಧಾಮಣಿ, ಗಂಗರಾಜ್ ಇತರರಿದ್ದರು. 
ಶಿವಮೊಗ್ಗ

ರಾಜ್ಯಮಟ್ಟಕ್ಕೆ ಆಯ್ಕೆಯಾದ ಭದ್ರಾವತಿ ವಿದ್ಯಾರ್ಥಿಗಳು

ಸೋಮಶೇಖರ ಎನ್
ಭದ್ರಾವತಿ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಆಯೋಜಿಸಿದ್ದ ಮಕ್ಕಳ ಕಥೆ, ಕವನ, ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ತಾಲೂಕಿನ 10 ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಅಭಿನಂದಿಸಿದರು.
ಜ.3ರಂದು ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯಲ್ಲಿ ತಾಲೂಕು ಮಟ್ಟ, ಜ.8ರಂದು ಶಿವಮೊಗ್ಗ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಕಥೆ, ಕವನ, ಪ್ರಬಂಧ ಸ್ಪರ್ಧೆ ನಡೆದಿತ್ತು. ಆಯ್ಕೆಯಾದ ವಿದ್ಯಾರ್ಥಿಗಳು ನಾಗಮಂಗಲದ ಆದಿಚುಂಚನಗಿರಿಯಲ್ಲಿ ಜ.16ರಂದು ಏರ್ಪಡಿಸಿರುವ ರಾಜ್ಯ ಮಟ್ಟದ ಮಕ್ಕಳ ಕಥೆ, ಕವನ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವರು.
ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್.ಸುಧಾಮಣಿ, ಗಂಗರಾಜ್, ತಿಪ್ಪಮ್ಮ, ಮಲ್ಲಿಕಾ ಹಾಗೂ ಸುಶೀಲಾ ಇತರರಿದ್ದರು.