ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ಉದ್ಯಾನ ನಿರ್ಮಾಣಕ್ಕೆ ತಾಪಂ ಇಒ ಎಂ.ಶೈಲಾ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಕಡಿದಾಳ್ ದಯಾನಂದ್, ನಾಗಯ್ಯ, ಪ್ರಭಾಕರ್ ಇತರರಿದ್ದರು. 
ಶಿವಮೊಗ್ಗ

ಮಂಡಗದ್ದೆಯಲ್ಲಿ ಜೀವವೈವಿಧ್ಯ ಗ್ರಂಥಾಲಯ

ಸೋಮಶೇಖರ ಎನ್
ತೀರ್ಥಹಳ್ಳಿ: ಪ್ರಕೃತಿ ವಿಕೋಪದಿಂದ ಆಗುವ ಹಾನಿ ತಡೆಯಲು ತಾಲೂಕಿನ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಜೀವವೈವಿಧ್ಯ ನಿರ್ವಹಣಾ ಸಮಿತಿ ಮೂಲಕ ರೈತರಿಗೆ ಜೇನು ಕೃಷಿ ಸೇರಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಎಂ.ಶೈಲಾ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಹಿ ಎಕ್ಸ್‌ಪೋರ್ಟ್ಸ್ ಸಂಸ್ಥೆ ಆರ್ಥಿಕ ನೆರವಿನೊಂದಿಗೆ ಮೇಲಿನ ಕುರುವಳ್ಳಿ ಗ್ರಾಪಂ ವ್ಯಾಪ್ತಿಯ 2 ಎಕರೆ ಪ್ರದೇಶದಲ್ಲಿ ಉದ್ಯಾನ ನಿರ್ಮಾಣಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಶಾಲಾ ಕಾಲೇಜುಗಳಲ್ಲಿ ನೀರಿನ ಸಂರಕ್ಷಣೆ ಹಾಗೂ ಪರಿಸರ ರಕ್ಷಣೆ ಬಗ್ಗೆ ನಿರಂತರ ಕಾರ್ಯಕ್ರಮ ನಡೆಸಲಾಗಿದೆ. ರಾಜ್ಯದಲ್ಲೇ ಪ್ರಥಮವಾಗಿ ಮಂಡಗದ್ದೆ ಗ್ರಾಪಂನಲ್ಲಿ ಜೀವವೈವಿಧ್ಯ ಗ್ರಂಥಾಲಯ ಪ್ರಾರಂಭಿಸಲಾಗಿದೆ. ಈ ಸಾಧನೆ ಗಮನಿಸಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿ ಗೌರವಿಸಿದೆ. ಸಾಮಾಜಿಕ ಮತ್ತು ಪರಿಸರ ಕಾಳಜಿಯೊಂದಿಗೆ ತೀರ್ಥಹಳ್ಳಿ ತಾಲೂಕಿನಲ್ಲಿ ಉದ್ಯಾನ ನಿರ್ಮಾಣಕ್ಕೆ ಸಂಸ್ಥೆಯು 37 ಲಕ್ಷ ರೂ. ನೆರವು ನೀಡುತ್ತಿರುವುದು ಶ್ಲಾಘನೀಯ ಎಂದರು.
ಚಿಂತಕ ಕಡಿದಾಳ್ ದಯಾನಂದ್, ಶಾಹಿ ಎಕ್ಸ್‌ಪೋರ್ಟ್ಸ್ ಸಂಸ್ಥೆಯ ನಾಗಯ್ಯ, ಮೇಲಿನಕುರುವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಪ್ರಭಾಕರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಘವೇಂದ್ರ, ಪಿಡಿಒ ಗಂಗಾಧರ ನಾಯಕ್, ಡಾ. ಎಂ.ಮನೋಹರ ರಾವ್, ಸವೋೀತ್ತಮ ನಾಯಕ್ ಇತರರಿದ್ದರು.