ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಡಿಸಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು. ಎನ್.ಕೆ.ಜಗದೀಶ್, ಆರ್.ಕೆ.ಸಿದ್ದರಾಮಣ್ಣ, ಮೋಹನ್ ರೆಡ್ಡಿ, ಎಸ್.ದತ್ತಾತ್ರಿ, ರಶ್ಮಿ ಶ್ರೀನಿವಾಸ್ ಇದ್ದರು. 
ಶಿವಮೊಗ್ಗ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು I bjp wants nagendra resign

ಪ್ರಮುಖ ಮುಖ್ಯಾಂಶಗಳು

  • ಡಿಸಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭ
  • ಪ್ರಕರಣದ ಶೀಘ್ರ ತನಿಖೆಗೆ ಒತ್ತಾಯ
ಶಿವಮೊಗ್ಗ:

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪ ಎದುರಿಸುತ್ತಿರುವ ಸಚಿವ (minister) ಬಿ.ನಾಗೇಂದ್ರ (nagendra) ಅವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಬಿಜೆಪಿ (bjp) ಪ್ರಮುಖರು ಸೋಮವಾರ ಡಿಸಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದ ಬಿ.ನಾಗೇಂದ್ರ ಅವರ ಮೌಖಿಕ ಆದೇಶದ ಮೇರೆಗೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿತ್ತು. ಅದರಲ್ಲಿ ನಾಗೇಂದ್ರ ಅವರು 88 ಕೋಟಿ ರೂ.ಗಳನ್ನು ತಮ್ಮ ಸ್ವಂತಕ್ಕೆ ಬಳಸಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ದೂರಿದರು.
ಪ್ರಕರಣಕ್ಕೆ ಸಂಬಂಧಿಸಿ ಆಗ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ನಾಗೇಂದ್ರ ರಾಜೀನಾಮೆ ನೀಡಿದ್ದರು. ಆದರೆ ಈಗ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲಾಗಿದೆ. ಯಾವ ನೈತಿಕ ಆಧಾರದಲ್ಲಿ ಅವರನ್ನು ಮತ್ತೆ ಮಂತ್ರಿ ಮಾಡಲಾಯಿತು ಎಂದು ಪ್ರಶ್ನಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಕೋರ್ಟ್ ಮತ್ತು ಜಾರಿ ನಿರ್ದೇಶನಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಆದರೂ ಅವರನ್ನು ಮಂತ್ರಿ ಮಾಡಿರುವುದರ ರಹಸ್ಯವೇನು? ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬದವರಿಗೆ ಸರ್ಕಾರದಿಂದ ಇನ್ನೂ ಸಂಪೂರ್ಣ ಪರಿಹಾರ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಎಂಎಲ್‌ಸಿ ಆರ್.ಕೆ.ಸಿದ್ದರಾಮಣ್ಣ, ಬಿಜೆಪಿ ನಗರಾಧ್ಯಕ್ಷ ಡಿ.ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ.ಹರಿಕೃಷ್ಣ, ಪ್ರಮುಖರಾದ ಎಸ್.ದತ್ರಾತ್ರಿ, ಹರಿಕೃಷ್ಣ, ಜ್ಯೋತಿ ಪ್ರಕಾಶ್, ಗಣೇಶ್ ಬಿಳಕಿ, ವಿನ್ಸೆಂಟ್ ರೋಡ್ರಿಗಸ್, ಹರೀಶ್, ಸಂತೋಷ್, ರಶ್ಮಿ ಶ್ರೀನಿವಾಸ್, ಸುರೇಖಾ ಮುರಳೀಧರ ಮುಂತಾದವರಿದ್ದರು.
"

ಸಚಿವ ಸ್ಥಾನ ನೀಡದಿದ್ದರೆ ವಾಲ್ಮೀಕಿ ಹಗರಣದ ವಿವರಗಳನ್ನು ಬಹಿರಂಗಪಡಿಸುತ್ತೇನೆ ಎಂದು ಬಿ.ನಾಗೇಂದ್ರ ಕಾಂಗ್ರೆಸ್ ಹೈ ಕಮಾಂಡ್‌ಗೆ ಬ್ಲಾೃಕ್‌ಮೇಲ್ ಮಾಡಿರುವಂತಿದೆ. ಇದೇ ಕಾರಣಕ್ಕೆ ಅವರನ್ನು ಸಚಿವರನ್ನಾಗಿ ಮಾಡಿ ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆದಿದೆ.

— ಎನ್.ಕೆ.ಜಗದೀಶ್ ಬಿಜೆಪಿ ಜಿಲ್ಲಾಧ್ಯಕ್ಷ