ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ  
ಶಿವಮೊಗ್ಗ

ಪ್ರಜಾಪ್ರಭುತ್ವ ಉಳಿಸಲು ಬಿಜೆಪಿಯಿಂದ ಪಾದಯಾತ್ರೆ BJP Padayatra

ಶಿವಮೊಗ್ಗ: ಅರಾಜಕತೆ ಸೃಷ್ಟಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಜಾಪ್ರಭುತ್ವ ಉಳಿಸಲು ಬಿಜೆಪಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ: ಅರಾಜಕತೆ ಸೃಷ್ಟಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಜಾಪ್ರಭುತ್ವ ಉಳಿಸಲು ಬಿಜೆಪಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಬೆಲೆ ಏರಿಕೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಮೂರು ಪಟ್ಟು ಕಿತ್ತುಕೊಳ್ಳುತ್ತಿದೆ. ಹೆಣ್ಣುಮಕ್ಕಳಿಗೆ ಉಚಿತ ಬಸ್ ಪ್ರಯಾಣ ಎಂದು ಹೇಳಿ ಮನೆ ಯಜಮಾನರ ಜೇಬಿಗೆ ಕತ್ತರಿ ಹಾಕುತ್ತಿದೆ. ಇದೀಗ ಹಾಲಿನ ದರ ಹಾಗೂ ಮೊಸರಿನ ಬೆಲೆಯಲ್ಲಿ ಗಣನೀಯ ಏರಿಕೆ ಮಾಡಿದೆ. ಡೀಸೆಲ್ ಮತ್ತು ಪೆಟ್ರೋಲ್ ಹಾಗೂ ಬಸ್ ದರವನ್ನು ಶೇ.30ರಿಂದ 40ರಷ್ಟು ಹೆಚ್ಚಿಸುವ ನೀಚ ಕೆಲಸವನ್ನು ಈ ಸರ್ಕಾರ ಮಾಡಿದೆ. ಅಲ್ಲದೆ, ದೀಪಾವಳಿ ಮುಗಿಯುತ್ತಿದ್ದಂತೆ ಕರೆಂಟ್ ಬಿಲ್ ಕೂಡ ಹೆಚ್ಚಳ ಮಾಡಲು ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಹುಲ್ ಗಾಂಧಿ ನೀಡಿರುವ ಸವಾಲು ಹಾಗೂ ವಿರೋಧ ಪಕ್ಷದ ನಾಯಕರ ವರ್ತನೆಯನ್ನು ಬಿಜೆಪಿ ತೀವ್ರವಾಗಿ ಆಕ್ಷೇಪಿಸುತ್ತದೆ. ಕೇಂದ್ರದ ಯುವ ನಾಯಕರು ಮತ್ತು ಕಾಂಗ್ರೆಸ್ ಮುಖಂಡರು ಅಸಂಸ್ಕೃತ ಮಾತುಗಳನ್ನು ಬಳಸುತ್ತಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಹಗುರವಾಗಿ ಮಾತನಾಡುವುದನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಕ್ಷಣವೇ ನಿಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಪಕ್ಷಕ್ಕೆ ತಾವು ಗೆದ್ದಾಗ ಪ್ರಜಾತಂತ್ರ ಸರಿ ಎನಿಸುತ್ತದೆ. ಆದರೆ ಸೋತಾಗ ಚುನಾವಣಾ ಆಯೋಗ ಸರಿ ಇಲ್ಲ ಎನ್ನುವ ಚರ್ಚೆಯನ್ನು ಮುನ್ನೆಲೆಗೆ ತರುತ್ತದೆ. ಸಂವಿಧಾನ ಮತ್ತು ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸಲಾಗುತ್ತಿದೆ.
ಬಿ.ವೈ.ರಾಘವೇಂದ್ರ, ಶಿವಮೊಗ್ಗ ಲೋಕಸಭಾ ಸದಸ್ಯ